ಶುಕ್ರವಾರ, ಫೆಬ್ರವರಿ 21, 2020
28 °C

’ಟಿಕ್‌ಟಾಕ್‌’ನಲ್ಲಿ ಬೆಂಗಳೂರು ನಗರ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟ್ವಿಟರ್‌, ಫೇಸ್‌ಬುಕ್‌ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಗರ ಪೊಲೀಸರು ಇದೀಗ ‘ಟಿಕ್‌ಟಾಕ್’ ಮೊಬೈಲ್ ಆ್ಯಪ್‌ನಲ್ಲೂ ‘@blrcitypolice' ಖಾತೆ ತೆರೆದಿದ್ದಾರೆ.

ಇಲಾಖೆಯ ಕಾರ್ಯಕ್ರಮ ಹಾಗೂ ಪೊಲೀಸರ ಸಾಧನೆ ವಿಡಿಯೊಗಳನ್ನು ಟಿಕ್‌ಟಾಕ್‌ ಖಾತೆಯಲ್ಲಿ ಅಪ್‌ಲೋಡ್‌ ಮಾಡಲಿದ್ದಾರೆ. ಪೊಲೀಸ್ ಖಾತೆಯನ್ನು 25 ಸಾವಿರಕ್ಕೂ ಹೆಚ್ಚು ಮಂದಿ ಹಿಂಬಾಲಿಸುತ್ತಿದ್ದಾರೆ. ಪೊಲೀಸರ ಕೆಲಸಗಳ ವಿಡಿಯೊಕ್ಕೆ ಸಂಗೀತ ಜೋಡಿಸಿ ಅಪ್‌ಲೋಡ್ ಮಾಡುತ್ತಿರುವುದು ಹಲವರ ಮೆಚ್ಚುಗೆ ಗಳಿಸಿದೆ. 

‘ಸಾಮಾಜಿಕ ಜಾಲತಾಣವೇ ಬಲಶಾಲಿಯಾದದ್ದು ಎಂಬುದಾಗಿ ಪೊಲೀಸರು ನಂಬಿದ್ದಾರೆ. ಜನರ ಜೊತೆ ಸಂಪರ್ಕ ಸಾಧಿಸಲು ಹೆಚ್ಚೆಚ್ಚು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದೇವೆ. ಈಗ ಟಿಕ್‌ಟಾಕ್‌ನಲ್ಲೂ ಖಾತೆ ತೆರೆದಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು