ಭಾನುವಾರ, ಸೆಪ್ಟೆಂಬರ್ 19, 2021
24 °C

ಬೆಂಗಳೂರು: 63 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಆಗ್ನೇಯ ವಿಭಾಗ ವ್ಯಾಪ್ತಿಯಲ್ಲಿ ವಾಸವಿರುವ ರೌಡಿಗಳ ಮನೆ ಮೇಲೆ ಪೊಲೀಸರು ಶುಕ್ರವಾರ ನಸುಕಿನಲ್ಲಿ ದಾಳಿ ಮಾಡಿದ್ದು, 18 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.

‘ಹಲವು ಅಪರಾದ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೂ ಹೋಗಿಬಂದಿದ್ದ ರೌಡಿಗಳು, ತಮ್ಮದೇ ತಂಡ ಕಟ್ಟಿಕೊಂಡು ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದರು. ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 63 ರೌಡಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ರೌಡಿಗಳಾದ ಸುರೇಶ್ ಅಲಿಯಾಸ್ ಮರ್ಡರ್, ಕಿಶೋರ್ ಅಲಿಯಾಸ್ ಪುಣೆ, ಅತಾವುಲ್ಲಾ, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ, ಗೆಜ್ಜೆ ವೆಂಕಟೇಶ್, ಸುಜಿತ್, ಆನಂದ್, ಗೌತಮ್, ಮಣಿಕಂಠ್, ತೇಜಸ್, ಅಂಬರೀಷ್ ಸೇರಿದಂತೆ ಹಲವರ ಮನೆ ಮೇಲೆ ದಾಳಿ ಆಗಿದೆ. ಈ ಪೈಕಿ 18 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು