ಬೆಂಗಳೂರು: ಕಟ್ಟಡವೊಂದರ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬಾಲಕಿ ಬೆಂಗಳೂರು ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ.

ಗುರುವಾರ ಮಧ್ಯಾಹ್ನ ಪಶ್ಚಿಮ ವಿಭಾಗದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಆರ್ಐ ಲೇಔಟ್ನ ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯ ಮೇಲೆ ನಿಂತು ‘ನಾನು ಸಾಯುತ್ತೇನೆ‘ ಎಂದು 16 ವಯಸ್ಸಿನ ಬಾಲಕಿ ಚೀರುತ್ತಿದ್ದಳು.

ಇದನ್ನು ಗಮನಿಸಿದ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಇಲಾಖೆಯವರು ಉಪಾಯ ಮಾಡಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಪಶ್ಚಿಮ ವಿಭಾಗದ ಪೊಲೀಸರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಬಾಲಕಿಯನ್ನು ನಿಹ್ಹ್ಯಾನ್ಸ್ನ ಮಾನಸಿಕ ಸಲಹಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಆತ್ಮಹತ್ಯೆ ಯತ್ನ ಸಂದರ್ಭದಲ್ಲಿ ಸಂತ್ರಸ್ತರು ಅಥವಾ ಅವರ ಸ್ನೇಹಿತರು, ಸಂಬಂಧಿಗಳು 14416 ಅಥವಾ 1-800-891-4416 24X7 ಉಚಿತ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.