ಮಂಗಳವಾರ, ಫೆಬ್ರವರಿ 25, 2020
19 °C

ಬೆಂಗಳೂರು ಜನಸಂಖ್ಯೆ 1.42 ಕೋಟಿಗೆ ಏರಲಿದೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಜನಸಂಖ್ಯೆಯು ಶೇ 48ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ರಾಜಧಾನಿಯಲ್ಲೇ ಶೇ 20ರಷ್ಟು ಮಂದಿ ನೆಲೆಸುವ ಸಾಧ್ಯತೆ ಕಂಡುಬಂದಿದೆ.

2011ರಲ್ಲಿ ಬೆಂಗಳೂರು ನಗರದಲ್ಲಿ 96.21 ಲಕ್ಷ ಜನಸಂಖ್ಯೆ ಇದ್ದರೆ, 2021ರ ವೇಳೆಗೆ ಈ ಸಂಖ್ಯೆ 1.42 ಕೋಟಿಗೆ ತಲುಪಲಿದೆ ಎಂದು ಆರ್ಥಿಕ ಹಾಗೂ ಅಂಕಿಸಂಖ್ಯೆ ಇಲಾಖೆಯ ನಿರ್ದೇಶನಾಲಯದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

2011ರಲ್ಲಿ ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಇತ್ತು. ಹಿಂದಿನ ಒಂದು ದಶಕದಲ್ಲಿ ಶೇ 17.77ರಷ್ಟು ಹೆಚ್ಚಳವನ್ನು ದಾಖಲಿಸಿತ್ತು. 2021ರ ವೇಳೆಗೆ ರಾಜ್ಯದ ಜನಸಂಖ್ಯೆ 7.19 ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

‘ಈಗಿರುವ ಒತ್ತಡವನ್ನೇ ತಡೆದುಕೊಳ್ಳಲು ಬೆಂಗಳೂರು ನಗರಕ್ಕೆ ಸಾಧ್ಯವಾಗುತ್ತಿಲ್ಲ. ಜನಸಂಖ್ಯೆಗೆ ಅನುಗು
ಣವಾಗಿ ಮೂಲಸೌಕರ್ಯ ಕಲ್ಪಿಸುವುದು ಕಷ್ಟಕರವಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಕಡಿವಾಣ ಹಾಕದಿದ್ದರೆ ಜನಸಂಖ್ಯೆ ನಿಯಂತ್ರಿಸಲು ಸಾಧ್ಯವಾಗದು. ಇದು ಅಪಾಯದ ಮುನ್ಸೂಚನೆ’ ಎಂದು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದರು.

ನಗರದ ನಾಲ್ಕು ದಿಕ್ಕಿನಲ್ಲೂ ಉಪನಗರಗಳ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಹೊರ ಭಾಗಗಳನ್ನು ಅಭಿವೃದ್ಧಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಕಷ್ಟಕರವಾಗುತ್ತದೆ. ಶುದ್ಧ ಗಾಳಿ ಸಿಗದಾಗುತ್ತದೆ. ಕಸ, ಒಳಚರಂಡಿ ನಿರ್ವಹಣೆ ಅಸಾಧ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು