ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವೇಶ್ಯಾವಾಟಿಕೆ: ಮೂವರ ಬಂಧನ

Published 29 ಮಾರ್ಚ್ 2024, 15:46 IST
Last Updated 29 ಮಾರ್ಚ್ 2024, 15:46 IST
ಅಕ್ಷರ ಗಾತ್ರ

ಬೆಂಗಳೂರು: ವೆಬ್‌ಸೈಟ್‌ ಬಳಸಿಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಕೃಷ್ಣ ಪ್ರಸಾದ್‌, ರಾಹುಲ್‌ ಹಾಗೂ ಆಶೀಶ್‌ ಬಂಧಿತರು. ಅವರಿಂದ 13 ಮೊಬೈಲ್‌ಗಳು, ಒಂದು ಸ್ಕೂಟರ್‌, ಒಂದು ಕಾರು ಹಾಗೂ ₹ 30 ಸಾವಿರ ನಗದು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಮೊಬೈಲ್‌, ವೆಬ್‌ಸೈಟ್‌ ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದರು. ಪ್ರಕರಣದ ಸೂತ್ರಧಾರ ಕೃಷ್ಣ ಪ್ರಸಾದ್‌’ ಎಂದು ಪೊಲೀಸರು ಹೇಳಿದರು.

‘ಮಾರ್ಚ್ 21ರಂದು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್‌ ಠಾಣೆ ಪಿಎಸ್‌ಐ ಅವರು, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಪೊಲೀಸ್‌ ಬಾತ್ಮೀದಾರರೊಬ್ಬರು ನೀಡಿದ್ದ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಇದೇ ಮಾಹಿತಿ ಆಧರಿಸಿ ಕೋರಮಂಗಲ, ಮಡಿವಾಳ ಸೇರಿದಂತೆ ನಗರದ ಇತರೆ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ನಗರದ ಕೆಲವು ಹೋಟೆಲ್‌ಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಪತ್ತೆಯಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT