ಬೆಂಗಳೂರು: ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದ ಮನೆಯೊಂದರಲ್ಲಿ ವಿದ್ಯಾರ್ಥಿನಿ ನೇಣುಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನುಶ್ರೀ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಖಾಸಗಿ ಕಾಲೇಜೊಂದರ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯು ಓದುತ್ತಿದ್ದ ತನುಶ್ರೀ ಮನೆಯ ಕೊಠಡಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿದ್ಯಾರ್ಥಿನಿ ತಾಯಿ ಆಶಾ ಅವರು ಕೊಠಡಿಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿತ್ತು. ಕೂಡಲೇ ಸ್ಥಳೀಯರ ಸಹಾಯ ಪಡೆದು ನೇಣಿನ ಕುಣಿಕೆಯಿಂದ ಮಗಳನ್ನು ಇಳಿಸಿದ್ದರು. ಹೆಬ್ಬಾಳ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಕೊಲೆ ಶಂಕೆ–ಸಂಬಂಧಿಕರ ಅನುಮಾನ:

ತನುಶ್ರೀ ಆತ್ಮಹತ್ಯೆ ಮಾಡಿಕೊಳ್ಳುವಂತಹ ಹುಡುಗಿ ಅಲ್ಲ. ಪೊಲೀಸರಿಗೆ ಮಾಹಿತಿ ನೀಡದೇ, ಸ್ಥಳೀಯರ ನೆರವು ಪಡೆದು ನೇಣಿನ ಕುಣಿಕೆಯಿಂದ ಮೃತದೇಹ ಇಳಿಸಲಾಗಿದೆ. ಆಕೆಯನ್ನು ಕೊಲೆ ಮಾಡಿ ನೇಣಿಗೆ ಹಾಕಿರುವ ಶಂಕೆಯಿದೆ ಎಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

‘ಸ್ಥಳದಲ್ಲಿ ಯಾವುದೇ ಮರಣ ಪತ್ರ ಪತ್ತೆ ಆಗಿಲ್ಲ. ಸಂಬಂಧಿಕರ ಆರೋಪದ ಮೇಲೆ ವಿದ್ಯಾರ್ಥಿನಿಯ ತಾಯಿ ಆಶಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.