ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಶಾಲೆಗೆ ಬಾಂಬ್‌ ಬೆದರಿಕೆಯ ಇ–ಮೇಲ್‌

Published 14 ಮೇ 2024, 16:10 IST
Last Updated 14 ಮೇ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್‌ ಹೆರಿಟೇಜ್‌ ಶಾಲೆಗೆ ಇ –ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು ಮಂಗಳವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸೋಮವಾರ ರಾತ್ರಿ ಇ–ಮೇಲ್‌ನಲ್ಲಿ ಕಿಡಿಗೇಡಿಗಳು ಬೆದರಿಕೆಯ ಸಂದೇಶ ಕಳುಹಿಸಿದ್ದರು. ಮಂಗಳವಾರ ಬೆಳಿಗ್ಗೆ 7.30 ಸುಮಾರಿಗೆ ಶಾಲಾ ಸಿಬ್ಬಂದಿ ಇ–ಮೇಲ್‌ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ತಿಳಿಯಿತು.

ಶಾಲಾ ಆವರಣದಲ್ಲಿ ಬಾಂಬ್‌ ಇಡಲಾಗಿದೆ. ಅದು ಸ್ಫೋಟಗೊಳ್ಳಲಿದೆ ಎಂದು ಇ–ಮೇಲ್‌ನಲ್ಲಿ ಬರೆಯಲಾಗಿತ್ತು. ಸಿಬ್ಬಂದಿ ತಕ್ಷಣವೇ ಠಾಣೆಗೆ ಮಾಹಿತಿ ನೀಡಿದರು. ಬಾಂಬ್‌ ಪತ್ತೆದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಸ್ಫೋಟದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವೆಂದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಈ ಹಿಂದೆಯೂ ನಗರದ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ–ಮೇಲ್‌ಗಳು ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT