ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ರಾತ್ರಿಯವರೆಗೆ ಉತ್ತಮ ಮಳೆಯಾಯಿತು. ಬಿಸಿಲಿನಿಂದ ಬಳಲಿದ್ದ ಜನರಿಗೆ ತಂಪೆರೆಯಿತು.

ಬಿಸಿಲ ಝಳದಿಂದ ತತ್ತರಿಸಿದ್ದ ನಗರದ ಉಷ್ಣಾಂಶ, ಭಾನುವಾರ ಸಂಜೆ ವೇಳೆಗೆ ಐದಾರು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಯಿತು. ನಗರದ ಹಲವು ಪ್ರದೇಶಗಳಲ್ಲಿ ಸಂಜೆಯಿಂದ ರಾತ್ರಿಯವರೆಗೂ ಗುಡುಗು–ಗಾಳಿ ಸಹಿತ ಸಾಧಾರಣ ಮಳೆಯಾಯಿತು. ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು.

ವರ್ತೂರು ರಸ್ತೆಯಲ್ಲಿ ಮಳೆ ನೀರು ನಿಂತು ಗುಂಜೂರು ಕಡೆಗೆ ವಾಹನಗಳ ಸಂಚಾರ ನಿಧಾನಗತಿಯಲ್ಲಿತ್ತು. ಕಸ್ತೂರಿನಗರ, ಹಳೆ ಮದ್ರಾಸ್ ರಸ್ತೆ, ವಿಜಯನಗರ, ಮಹಾತ್ಮ ಗಾಂಧಿ ರಸ್ತೆ, ದೀಪಾಂಜಲಿನಗರ, ಮಲ್ಲೇಶ್ವರ, ಮೆಜೆಸ್ಟಿಕ್, ಹೈಗ್ರೌಂಡ್ಸ್, ಸ್ವಾತಂತ್ರ್ಯ ಉದ್ಯಾನ, ವಸಂತನಗರ, ಶಿವಾಜಿನಗರ, ರೇಸ್ಕೋರ್ಸ್ ರಸ್ತೆ, ಕೆ.ಆರ್. ಮಾರುಕಟ್ಟೆ, ಶಾಂತಿನಗರ, ವೈಟ್ಫೀಲ್ಡ್ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.

ವಿದ್ಯುತ್ ವ್ಯತ್ಯಯ: ಮಳೆಯಿಂದಾಗಿ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ಕೆಲವು ಕಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.