ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮ–ಶಿಕ್ಷಣ ಸಂಸ್ಥೆಗಳ ಮಧ್ಯೆ ಸಂಪರ್ಕ ಅಗತ್ಯ: ಪರಮೇಶ್ವರ

Last Updated 16 ಜನವರಿ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಕ್ಷೇತ್ರಗಳು ಇನ್ನಷ್ಟು ಬಲಿಷ್ಠವಾಗಬೇಕಿದ್ದರೆ ಉದ್ಯಮ ಮತ್ತು ಶಿಕ್ಷಣ ಸಂಸ್ಥೆಗಳ ಮಧ್ಯೆ ನೇರ ಸಂಪರ್ಕ ಏರ್ಪಡಬೇಕು ಎಂದು ಐಟಿ– ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ನವೆಂಬರ್‌ನಲ್ಲಿ ನಡೆಯುವ ‘ಬೆಂಗಳೂರು ಟೆಕ್‌ಸಮ್ಮಿಟ್‌’ನ ಪೂರ್ವಭಾವಿ ಸಭೆ ಕರೆದಿದ್ದ ಅವರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಉದ್ಯಮಿಗಳ ಜತೆ ಮಾತುಕತೆ ನಡೆಸಿದರು.

‘ಉದ್ಯಮಕ್ಕೆ ಬೇಕಾದ ರೀತಿಯಲ್ಲಿ ಶಿಕ್ಷಣ, ತರಬೇತಿ ನೀಡಬೇಕೆಂದರೆ ಶಿಕ್ಷಣ ವಲಯ ಹಾಗೂ ಕೈಗಾರಿಕೆ ನಡುವೆ ಸೇತುವೆ ಇರಬೇಕು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭ ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಪಠ್ಯಗಳನ್ನು ಬದಲಿಸುವ ಉದ್ದೇಶ ಹೊಂದಿದ್ದೆ’ ಎಂದು ಅವರು ಹೇಳಿದರು.

‘ಕರ್ನಾಟಕ ಸರ್ಕಾರ ಮೊದಲ ಬಾರಿಗೆ ನವೋದ್ಯಮ ನೀತಿಯನ್ನು ಜಾರಿಗೆ ತಂದಿದೆ. ಇಂದು ದೇಶದಲ್ಲಿ 40 ಸಾವಿರ ನವೋದ್ಯಮಗಳಿದ್ದು, ಈ ಪೈಕಿ 13 ಸಾವಿರ ನವೋದ್ಯಮಗಳು ನಮ್ಮ ರಾಜ್ಯದಲ್ಲೇ ಇವೆ. ಇದರಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಕೈಗಾರಿಕೆ ಸ್ಥಾಪನೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಲಾಗಿದೆ. ಆದ್ದರಿಂದ ವಿಶ್ವದ ವಿವಿಧ ಭಾಗಗಳಿಂದ ಉದ್ಯಮಿಗಳು ಕಂಪನಿ ತೆರೆಯಲು ಕರ್ನಾಟಕ ರಾಜ್ಯವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.ತುಮಕೂರು ಬಳಿ ಬೃಹತ್‌ ಕೈಗಾರಿಕಾ ಹಬ್ ನಿರ್ಮಾಣ ಮಾಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕ ಮೊದಲ ಸ್ಥಾನಕ್ಕೇರುತ್ತಿದೆ. ಈ ಹಬ್‌ನಲ್ಲಿ ಜಪಾನಿನ ಉದ್ಯಮಗಳೂ ಸ್ಥಾಪನೆಗೊಳ್ಳುತ್ತಿವೆ’ ಎಂದರು.‌

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT