ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಇಳಿಕೆ

Published 24 ಅಕ್ಟೋಬರ್ 2023, 19:36 IST
Last Updated 24 ಅಕ್ಟೋಬರ್ 2023, 19:36 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕನಿಷ್ಠ ತಾಪಮಾನ ಇಳಿಕೆ ಕಂಡಿದ್ದು, ಮಂಗಳವಾರ 17.1 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಇದು ಈ ತಿಂಗಳು ನಗರದಲ್ಲಿ ವರದಿಯಾದ ಕನಿಷ್ಠ ತಾಪಮಾನವಾಗಿದೆ. 

ಈ ತಿಂಗಳ ಬಹುತೇಕ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್ ವರದಿಯಾಗಿತ್ತು. ಮಂಗಳವಾರ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಬೆಳಿಗ್ಗೆ 8.30ರ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 17.2 ಡಿಗ್ರಿ ಸೆಲ್ಸಿಯಸ್ ಹಾಗೂ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮೋಡದ ವಾತಾವರಣದಿಂದ ಉಷ್ಣಾಂಶ ಇಳಿಕೆಯಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಲಾಖೆಯ ಪ್ರಕಾರ ಮುಂದಿನ ಐದು ದಿನಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT