ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕಚೇರಿಯಲ್ಲಿ ಹಣ ದೋಚಿದ್ದ ಆರೋಪಿ ಬಂಧನ

Published 14 ಮೇ 2024, 16:07 IST
Last Updated 14 ಮೇ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ನಿವಾಸಿ ಮಹೇಶ್ (34) ಬಂಧಿತ.

ಆರೋಪಿ ವಿಜಯನಗರದ ಸರ್ವೀಸ್ ರಸ್ತೆಯಲ್ಲಿರುವ ಕೆಎನ್‌ಎಸ್ ಕಚೇರಿಯಲ್ಲಿ ಕ್ಯಾಶ್ ಬಾಕ್ಸ್‌ನಲ್ಲಿದ್ದ ₹25 ಲಕ್ಷವನ್ನು ದೋಚಿ ಪರಾರಿಯಾಗಿದ್ದ. ಕಚೇರಿ ಸಿಬ್ಬಂದಿ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ನಿವೃತ್ತ ಪಿಎಸ್‌ಐ ಪುತ್ರ ಮಹೇಶ್, ಕೆಎನ್‌ಎಸ್‌ ಕಚೇರಿಯಲ್ಲಿ ಎರಡು ವರ್ಷಗಳಿಂದ ಡಾಕ್ಯುಮೆಂಟ್ ಎಕ್ಸಿಕ್ಯುಟಿವ್ ಕೆಲಸ ಮಾಡಿಕೊಂಡಿದ್ದ. ಮಾರ್ಚ್‌ 20ರಂದು ಕಚೇರಿಯಲ್ಲಿದ್ದ ಹಣ ದೋಚಿ ಮೂಡಲಪಾಳ್ಯದ ತನ್ನ ಸ್ನೇಹಿತನ ಮನೆಯಲ್ಲಿ ಇಟ್ಟಿದ್ದ. ವೈಯಕ್ತಿಕ ಖರ್ಚಿಗಾಗಿ ₹50 ಸಾವಿರ ತೆಗೆದುಕೊಂಡು ಹೋಗಿದ್ದ. ಬಳಿಕ ತನಿಖೆ ಕೈಗೊಂಡು ಆರೋಪಿಯನ್ನು ಮಡಿಕೇರಿಯಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಸ್ನೇಹಿತನ ಮನೆಯಲ್ಲಿದ್ದ ₹24.50 ಲಕ್ಷ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT