ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕೆಲಸಕ್ಕಿದ್ದ ಮನೆಯಲ್ಲಿ ಕಳ್ಳತನ: ಮಹಿಳೆ ಸೆರೆ

Published 14 ಮೇ 2024, 15:59 IST
Last Updated 14 ಮೇ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ಎನ್‌ಎಚ್‌ಸಿಎಸ್‌ ಲೇಔಟ್‌ನಲ್ಲಿ ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದ ಮಹಿಳೆಯನ್ನು ಬಸವೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಮಲನಗರದ ನಿವಾಸಿ ಉಷಾ (43) ಬಂಧಿತ ಆರೋಪಿ.

‘ಮನೆಯ ಮಾಲೀಕರು ನೀಡಿದ ದೂರು ಆಧರಿಸಿ, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಮನೆ ಕೆಲಸಕ್ಕಿದ್ದ ಉಷಾ ಅವರನ್ನು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಯಿಂದ ₹4 ಲಕ್ಷ ಮೌಲ್ಯದ 66 ಗ್ರಾಂ ಚಿನ್ನಾಭರಣ, 155 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ನಕಲಿ ಕೀ ಬಳಸಿ ಮನೆಯಲ್ಲಿ ಚಿನ್ನಾಭರಣ ಕಳವು:
ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಲ್ಲಿ ನಕಲಿ ಕೀ ಬಳಸಿ ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ್‌ (44) ಬಂಧಿತ ಆರೋಪಿ.

‘ಡ್ರಾಯರ್‌ನಲ್ಲಿ ಇಡಲಾಗಿದ್ದ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆ ಮಾಲೀಕ ದೂರು ನೀಡಿದ್ದರು. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 422 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್‌ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಬಂಧನದಿಂದ ಬೇಗೂರು, ಚಂದ್ರಾಲೇಔಟ್‌, ಎಚ್‌ಎಸ್‌ಆರ್‌ ಲೇಔಟ್‌, ಹುಳಿಮಾವು, ಕುಮಾರಸ್ವಾಮಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ ಆರು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT