ಬೆಂಗಳೂರು: ಲೋಕಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಅವರ ಪ್ರಮಾಣವಚನ ಸಮಾರಂಭ ನಡೆಯುವ ಕಾರಣ ಬುಧವಾರ ಹಲವು ಕಡೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಲೋಕಭವನಕ್ಕೆ ಆಹ್ವಾನ ಪತ್ರಿಕೆ ಇದ್ದವರಿಗೆ ಮಾತ್ರ ಪ್ರವೇಶವಿದೆ.

ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯಾಹ್ನ 12 ರಿಂದ ರಾತ್ರಿ 8ರವರೆಗೆ ಸಂಚಾರದಲ್ಲಿ ಮಾರ್ಪಾಡುಗಳನ್ನು ಮಾಡಲಾಗಿದೆ.

ಮಧ್ಯಾಹ್ನ 12 ರಿಂದ ರಾತ್ರಿ 10 ರವರೆಗೆ ನಗರದ ವ್ಯಾಪ್ತಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸಾರ್ವಜನಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಂಡು, ಸೂಚಿಸಲಾದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ ರಸ್ತೆ...

* ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್ನಿಂದ ಸಿ.ಟಿ.ಓ. ಜಂಕ್ಷನ್ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ.

*ಬಾಳೇಕುಂದ್ರಿ ಜಂಕ್ಷನ್ನಿಂದ ಅಂಬೇಡ್ಕರ್ ರಸ್ತೆ ಕಡೆಗೆ

*ಡಾ.ಅಂಬೇಡ್ಕರ್ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ವರೆಗೆ

*ರೇಸ್ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್ನಿಂದ ಸುಬ್ಬಣ್ಣ ಜಂಕ್ಷನ್ವರೆಗೆ ಹಾಗೂ ಜೆಡಿಎಸ್ನ ಹಳೆಯ ಕಚೇರಿಯ ಕ್ರಾಸ್ನಿಂದ ಸುಬ್ಬಣ್ಣ ಜಂಕ್ಷನ್ವರೆಗೆ

*ಕ್ವೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಓ ಕಡೆಗೆ

*ಕ್ವೀನ್ಸ್ ಜಂಕ್ಷನ್ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಓ. ಜಂಕ್ಷನ್ ಕಡೆಗೆ

ಈ ಮೇಲಿನ ಮಾರ್ಗಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ...

* ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲ ತಿರುವು ಹಾಗೂ ಅನಿಲ್ ಕುಂಬ್ಳೆ, ಜಂಕ್ಷನ್ ಕಡೆಗೆ ಎಡತಿರುವು ಪಡೆದು ಸಂಚರಿಸಬಹುದು.

* ಕ್ವೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್ಹ್ಯಾಮ್ ರಸ್ತೆಯ ಮುಖಾಂತರ ಸಾಗಬೇಕು.

* ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯ ಮೂಲಕ ಸಂಚರಿಸಬಹುದು.

* ರೇಸ್ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್ ಕಡೆಯಿಂದ ಶಿವಾನಂದ ಜಂಕ್ಷನ್ ಮೂಲಕ ಎಸ್.ಸಿ. ರಸ್ತೆ, ಜಂಕ್ಷನ್ ತಲುಪಿ ಎಡ ತಿರುವು ಪಡೆದು ಸಾಗಬೇಕು.

* ಕ್ವೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್ಕುಂಬ್ಳೆ ಹಾಗೂ ಬಿ.ಆರ್.ವಿ. ಜಂಕ್ಷನ್ ಮುಖಾಂತರ ಸಂಚರಿಸಬಹುದು.

* ಹಲಸೂರು ಮತ್ತು ಹಳೆ ಏರ್ಪೊರ್ಟ್ ಕಡೆಯಿಂದ ಕೆಂಪೇಗೌಡ ಏರ್ಪೋರ್ಟ್ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.

* ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ, ಕಡೆಯಿಂದ ಹೆಬ್ಬಾಳ ಕಡೆಗೆ ಸಂಚರಿಸುವ ವಾಹನಗಳ ಸವಾರರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ಬಳಿಯಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಸಂಚರಿಸುವುದು.

* ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ, ಕಡೆಯಿಂದ ಬರುವಂತಹ ವಾಹನಗಳು ಬಿ.ಆರ್.ವಿ ಜಂಕ್ಷನ್ ಶಿವಾಜಿನಗರ ಬಸ್ ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ

l ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ ರಸ್ತೆಯ ಎರಡೂ ಬದಿ.

l ಲೋಕಭವನ ರಸ್ತೆ ಬಿ.ಆರ್.ವಿ. ವೃತ್ತದಿಂದ– ಲೋಕಭವನ ಜಂಕ್ಷನ್ ವರೆಗೆ

l ಎಲ್.ಎಚ್.ರಸ್ತೆ, ಲೋಕಭವನ ಜಂಕ್ಷನ್ನಿಂದ– ಚಾಲುಕ್ಯ ವೃತ್ತದ ವರೆಗೆ

l ಕ್ವೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್ನಿಂದ– ಕ್ವೀನ್ಸ್ ವೃತ್ತದವರೆಗೆ

l ಪ್ಯಾಲೇಸ್ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ – ವಸಂತನಗರ ಕೆಳಸೇತುವೆವರೆಗೆ

l ದೇವರಾಜ ಅರಸ್ ರಸ್ತೆ, ಚಾಲುಕ್ಯ ವೃತ್ತದಿಂದ ಎಂ.ಎಸ್.ಬಿಲ್ಡಿಂಗ್ವರೆಗೆ (ಒಳಭಾಗದ
ರಸ್ತೆ ಸೇರಿ)

l ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್ನಿಂದ ಚಾಲುಕ್ಯ ವೃತ್ತದವರೆಗೆ

l ಪಾರ್ಕ್ ಹೌಸ್ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತದವರೆಗೆ

l ಕಬ್ಬನ್ ಉದ್ಯಾನದ ಒಳಭಾಗದ ರಸ್ತೆಗಳು

l ಮಿಲ್ಲರ್ ರಸ್ತೆ, ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತದವರೆಗೆ

l ಇನ್ಫೆಂಟ್ರಿ ರಸ್ತೆ, ಅಲಿ ಆಸ್ಕರ್ ರಸ್ತೆ ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ ವರೆಗೆ

l ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್ ನಿಂದ ಅಲಿ ಆಸ್ಕರ್ ಕ್ರಾಸ್ವರೆಗೆ

l ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ

l ಹಳೇ ಅಂಚೆ ಕಚೇರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತದವರೆಗೆ

l ನೃಪತುಂಗ ರಸ್ತೆ, ಕೆ.ಆರ್.ವೃತ್ತದಿಂದ ಪೊಲೀಸ್ ಕಾರ್ನರ್ವರೆಗೆ

l ಕಸ್ತೂರಬಾ ರಸ್ತೆ, ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ

l ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್ವರೆಗೆ

l ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ನಿಂದ ಹಡ್ಸನ್ ವೃತ್ತದ ವರೆಗೆ

l ಕಬ್ಬನ್ ರಸ್ತೆ, ಸಿ.ಟಿ.ಒ. ವೃತ್ತದಿಂದ ಮಣಿಪಾಲ್ ಸೆಂಟರ್ವರೆಗೆ

l ಟಿ.ಚೌಡಯ್ಯ ರಸ್ತೆ, ಹಳೇ ಹೈಗ್ರೌಂಡ್ಸ್ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್ವರೆಗೆ

l ರಮಣ ಮಹರ್ಷಿ ರಸ್ತೆ, ಕಾವೇರಿ ಜಂಕ್ಷನ್ನಿಂದ ಮೇಖ್ರಿ ವೃತ್ತದ ವರೆಗೆ

ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿಲ್ಲದ ವಾಹನಗಳು

l ಕೊಂಡಜ್ಜಿ ಭವನ ಆವರಣ.

l ಶಿವಾಜಿನಗರ ಬಸ್ ನಿಲ್ದಾಣದ ಮೇಲ್ಭಾಗದ ಮಲ್ವಿಲೆವೆಲ್ ಪಾರ್ಕಿಂಗ್ ಸ್ಥಳ

l ಕಂಠೀರವ ಕ್ರೀಡಾಂಗಣ

l ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ

l ಸರ್ಕಾರಿ ಕಲಾ ಕಾಲೇಜು ಆವರಣ

l ಕಾರ್ಪೊರೇಷನ್ ಕಚೇರಿ ಸ್ಥಳ

l ಪ್ಯಾಲೇಸ್ ಮೈದಾನದ ಗೇಟ್ ನಂ. 2, 3
ಮತ್ತು 4ರಲ್ಲಿ

ವಾಹನಗಳ ನಿಲುಗಡೆ ಪ್ರದೇಶ

(ಪಾಸ್ ಹೊಂದಿರುವ ವಾಹನಗಳು)

l ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತ

l ರಾಜಭವನ ಹಿಂಭಾಗದ ಎಲ್.ಎಚ್. ವಾಹನ ನಿಲುಗಡೆ ಸ್ಥಳ

l ನೆಹರೂ ತಾರಾಲಯದ ಆವರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.