ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿ: ಆಂತರಿಕ ಮೌಲ್ಯಮಾಪನ ಮೇಳ

Last Updated 11 ಜೂನ್ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು:ಆಂತರಿಕ ಮೌಲ್ಯಮಾಪನದ ಅಂಕಗಳ ಗೊಂದಲ ನಿವಾರಿಸಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದ್ದು, ಆಂತರಿಕ ಮೌಲ್ಯಮಾಪನದ ಅಂಕಗಳನ್ನು ಸಕಾಲದಲ್ಲಿ ಅಪ್‌ಲೋಡ್‌ ಮಾಡದವರಿಗೆ ಪರೀಕ್ಷಾ ಪ್ರವೇಶ ಪತ್ರ ನೀಡುವುದಿಲ್ಲ ಎಂದು ಕಾಲೇಜುಗಳಿಗೆ ಎಚ್ಚರಿಕೆ ನೀಡಿದೆ.

2009ರಿಂದ ಇಂತಹ ನೂರಾರು ಪ್ರಕರಣಗಳು ಇತ್ಯರ್ಥವಾಗದೇ ಹಾಗೆಯೇ ಉಳಿದಿವೆ. ‘ಅಂಕಗಳನ್ನು ಅಪ್‌ಲೋಡ್‌ ಮಾಡದ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ನೀಡಲು ಸಾಧ್ಯವಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಹೀಗಾಗಿ, 3.5 ಲಕ್ಷ ವಿದ್ಯಾರ್ಥಿಗಳ ಅಂಕ ಸರಿಯಾದ ಸಮಯಕ್ಕೆ ಅಪ್‌ಲೋಡ್‌ ಆಗಿದೆ’ ಎಂದು ಕುಲಸಚಿವ (ಮೌಲ್ಯಮಾಪನ) ಶಿವರಾಜು ತಿಳಿಸಿದರು.

ಆಂತರಿಕ ಮೌಲ್ಯಮಾಪನ ಮೇಳ: ಆಂತರಿಕ ಮೌಲ್ಯಮಾಪನದ ಅಂಕಗಳ ಸಮಸ್ಯೆ ಪರಿಹರಿಸುವ ಸಲುವಾಗಿ ಮೊದಲ ಬಾರಿಗೆ ವಿಶ್ವವಿದ್ಯಾಲಯ ‘ಆಂತರಿಕ ಮೌಲ್ಯಮಾಪನ ಮೇಳ’ ಸಂಘಟಿಸಿತು.

ಜ್ಞಾನಭಾರತಿ ಕ್ಯಾಂಪಸ್‌ನ ಆವರಣದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ಗಂಟೆವರೆಗೆ ಮೇಳ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT