ಶನಿವಾರ, ಜೂಲೈ 4, 2020
22 °C

ಚಲನಚಿತ್ರ ಅಕಾಡೆಮಿ-ಬೆಂಗಳೂರು ವಿವಿ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಂಎಸ್ಸಿ ಫಿಲ್ಮ್ ಮೇಕಿಂಗ್ ಕೋರ್ಸ್‍ನ ವಿದ್ಯಾರ್ಥಿಗಳಿಗೆ ಚಲನಚಿತ್ರ ನಿರ್ಮಾಣದ ವೃತ್ತಿಪರ ತರಬೇತಿ ನೀಡುವ ಸಂಬಂಧ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ವಿಶ್ವವಿದ್ಯಾಲಯವು ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿವೆ.

'ಫಿಲ್ಮ್ ಮೇಕಿಂಗ್ ಕೋರ್ಸ್‌ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಅಕಾಡೆಮಿ ಸಹಕರಿಸಬೇಕು' ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮನವಿ ಮಾಡಿದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, 'ಅಕಾಡೆಮಿಯು ಕಾರ್ಯ ವ್ಯಾಪ್ತಿ ಹೆಚ್ಚಿಸಿ, ಶೈಕ್ಷಣಿಕ ಚಟುವಟಿಕೆಗಳ ಮೂಲಕ ಕಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಉತ್ಸುಕವಾಗಿದೆ. ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ವೃತ್ತಿಪರ ತರಬೇತಿಗೆ ಸಹಕರಿಸಲಾಗುವುದು' ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು