ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆನ್ಲೈನ್ ಮತ್ತು ದೂರ ಶಿಕ್ಷಣ ನಿರ್ದೇಶನಾಲಯವು ಮೊದಲ ಬಾರಿಗೆ ಆನ್ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಉನ್ನತ ಶಿಕ್ಷಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹೊಸ ಮೈಲುಗಲ್ಲು ಸಾಧಿಸಿದೆ.

ಒಟ್ಟು 870 ವಿದ್ಯಾರ್ಥಿಗಳು ಮನೆಯಿಂದಲೇ ಆನ್ಲೈನ್ ಮೂಲಕ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ 697 ಮಂದಿ ಬೆಂಗಳೂರಿನಿಂದ, 123 ಮಂದಿ ರಾಜ್ಯದ ಇತರೆ ಭಾಗಗಳಿಂದ ಹಾಗೂ 48 ಮಂದಿ ಹೊರ ರಾಜ್ಯಗಳಿಂದ ಪರೀಕ್ಷೆ ಬರೆದಿದ್ದಾರೆ. ಅಲ್ಲದೆ ದುಬೈ ಹಾಗೂ ಆಸ್ಟ್ರೇಲಿಯಾದಿಂದ ತಲಾ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದರು.

ಪರೀಕ್ಷೆಗೆ ಹಾಜರಾದವರಲ್ಲಿ 479 ಮಹಿಳೆಯರು ಮತ್ತು 391 ಪುರುಷರು ಇದ್ದಾರೆ. ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿರುವುದು ಗಮನಾರ್ಹ. 361 ಮಂದಿ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. 122 ಮಂದಿ ಪರಿಶಿಷ್ಟ ಜಾತಿ ಹಾಗೂ 17 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ.

ಆನ್ಲೈನ್ ಮತ್ತು ದೂರ ಶಿಕ್ಷಣ ವಿದ್ಯಾರ್ಥಿಗಳಿಗೆ ಸಂಜೆ 5ರಿಂದ ರಾತ್ರಿ 9ರವರೆಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗಿತ್ತು. ಇದರಿಂದ ಉದ್ಯೋಗದಲ್ಲಿ ಇರುವವರು ಕೂಡ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ ಹಾಗೂ ವಿ.ವಿಯ ಸಿಬ್ಬಂದಿ ಮೇಲ್ವಿಚಾರಣೆಯಲ್ಲಿ ಪರೀಕ್ಷಾ ಪ್ರಕ್ರಿಯೆ ನಡೆಯಿತು. ಪ್ರಶ್ನೆಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ಆನ್ಲೈನ್ ಮೂಲಕ ರವಾನಿಸಲಾಯಿತು. ವಿದ್ಯಾರ್ಥಿಗಳು ಪರೀಕ್ಷೆ ಬರೆದ ನಂತರ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ಮೌಲ್ಯಮಾಪನ ಮಾಡಲಿದೆ.

ಎಂ.ಎ ಇಂಗ್ಲಿಷ್, ಕನ್ನಡ, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಸಮಾಜಶಾಸ್ತ್ರ, ಎಂ.ಎಸ್ಸಿ ಗಣಿತ, ಎಂ.ಕಾಂ ಹಾಗೂ ಬಿ.ಕಾಂ ಸೇರಿದಂತೆ ವಿವಿಧ ಸ್ನಾತಕೋತ್ತರ ಮತ್ತು ಸ್ನಾತಕ ಪದವಿಯ ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸಲಾಗಿದೆ.

‘ಮನೆಗಳಲ್ಲಿ ಲ್ಯಾಪ್ಟಾಪ್ ಅಥವಾ ಡೆಸ್ಕ್ಟಾಪ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಜ್ಞಾನಭಾರತಿಯ ಕ್ಯಾಂಪಸ್ನಲ್ಲಿ ಕಂಪ್ಯೂಟರ್ ಸೌಲಭ್ಯಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ವ್ಯವಸ್ಥೆ ಮಾಡಿತ್ತು. ಯಾವ ವಿದ್ಯಾರ್ಥಿಗೂ ಅನಾನುಕೂಲವಾಗದಂತೆ ನೋಡಿಕೊಳ್ಳಲಾಗಿದೆ’ ಎಂದು ದೂರಶಿಕ್ಷಣ ಕೇಂದ್ರದ ನಿರ್ದೇಶಕ ಪ್ರೊ.ಮುರುಳೀಧರ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.