ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ಟ್ರೈನಿಗಳ ಆಯ್ಕೆಗಾಗಿ ಫೆ.23ರ ಬೆಳಿಗ್ಗೆ 11 ಗಂಟೆಗೆ ಜ್ಞಾನಭಾರತಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಸೈನ್ಸ್ನಲ್ಲಿ ಉತ್ತೀರ್ಣರಾಗಿರುವ ಆಸಕ್ತರು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಿರುವ ಅರ್ಜಿಯ ನಮೂನೆಯಲ್ಲಿ ಸ್ವ ವಿವರಗಳನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದು.

ಮೆರಿಟ್ ಮತ್ತು ಮೀಸಲಾತಿ ಅನುಸಾರ 20 ಜನ ಅಪ್ರೆಂಟಿಸ್ಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹15,000 ಶಿಷ್ಯವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಜಾಲತಾಣ https://bangaloreuniversity.Karnataka.gov.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.