ಗುರುವಾರ , ಜೂನ್ 24, 2021
28 °C

ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಮೈಲಾರಪ್ಪ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರನ್ನಾಗಿ ಸಮಾಜವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಸಿ. ಮೈಲಾರಪ್ಪ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. 

‘ಕಳೆದ ಜುಲೈ 1ರಿಂದ ಮುಂದಿನ ಜೂನ್‌ 30ರವರೆಗಿನ ಒಂದು ವರ್ಷದ ಅವಧಿಗೆ ಈ ನೇಮಕ ಮಾಡಲಾಗಿದೆ’ ಎಂದು ಕುಲಸಚಿವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. 

ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನ 

ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಕಾಂ ಮತ್ತು ಎಂಟಿಟಿಎಂ ಕೋರ್ಸ್‌ಗಳಿ 2020–21ನೇ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಆ.20 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಮಾಹಿತಿಗೆ– 080–22961958 ಅಥವಾ 92421–88368. 

ಪದವಿ ಪ್ರಮಾಣಪತ್ರ: ಅರ್ಜಿ ಆಹ್ವಾನ 

ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವವು ಮುಂದಿನ ಸೆಪ್ಟೆಂಬರ್‌–ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಪದವಿ ಪ್ರಮಾಣ ಪಡೆಯದೇ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಭಾರತೀಯ ಪ್ರಜೆಗೆ ₹1,180, ವಿದೇಶಿ ಪ್ರಜೆಗೆ ₹4,515 ಶುಲ್ಕ ನಿಗದಿ ಪಡಿಸಲಾಗಿದೆ. ಆ.21 ಅರ್ಜಿ ಸಲ್ಲಿಸಲು ಕೊನೆಯ ದಿನ. ₹200 ದಂಡ ಸಹಿತ ಕೊನೆಯ ದಿನ ಆ.29. 

ಮಾಹಿತಿಗೆ, www.bangaloreuniversity.ac.in ವೆಬ್‌ಸೈಟ್‌ ಸಂಪರ್ಕಿಸಬಹುದು. 

ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ 

ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಐದು ವರ್ಷಗಳ ಬಿಎಸ್‌ಸಿ–ಎಂಎಸ್‌ಸಿ ಇಂಟಿಗ್ರೇಟೆಡ್‌ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆ. 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. 

ಮಾಹಿತಿಗೆ– 080– 22961521/1923 ಅಥವಾ 8722048456. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.