ಬೆಂಗಳೂರು: ವಿದ್ಯಾರ್ಥಿನಿಲಯಗಳಲ್ಲಿ ಅನಧಿಕೃತವಾಗಿ ವಾಸಿಸುತ್ತಿ ರುವ ವಿದ್ಯಾರ್ಥಿಗಳು ಮತ್ತು ವ್ಯಕ್ತಿಗಳನ್ನು ಹೊರ ಹಾಕಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.
ಪದೇ ಪದೇ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆಯುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗುತ್ತಿವೆ. ಕೆಲ ವಿದ್ಯಾರ್ಥಿಗಳು ರಕ್ಷಣೆ ನೀಡಬೇಕು ಎಂದು ವಿಶ್ವವಿದ್ಯಾಲಯಕ್ಕೆ ಹಾಗೂ ಜ್ಞಾನ ಭಾರತಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಇಂತಹ ಘಟನೆ ವಿಶ್ವವಿದ್ಯಾಲಯಕ್ಕೆ ಶೋಭೆ ತರುವುದಿಲ್ಲ. ಇದರಿಂದ, ವಿಶ್ವವಿದ್ಯಾಲಯದ ಆವರಣದ ಒಳಗೆ ಶೈಕ್ಷಣಿಕ ವಾತಾ ವರಣಕ್ಕೆ ಪೂರಕವಾಗಿರುವುದಿಲ್ಲ ಎಂದು ಕುಲಸಚಿವರು ತಿಳಿಸಿದ್ದಾರೆ.
ಅನಧಿಕೃತವಾಗಿ ವಿದ್ಯಾರ್ಥಿನಿಲಯಗಳಲ್ಲಿ ವಾಸಿಸುತ್ತಿರುವ ವ್ಯಕ್ತಿಗಳ ಪ್ರಚೋದನೆಯಿಂದ ಇಂತಹ ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಜತೆಗೆ ಅನಧಿಕೃತ ವ್ಯಕ್ತಿಗಳಿಂದ ಅಧಿಕೃತ ವಿದ್ಯಾರ್ಥಿಗಳಿಗೆ ಮೂಲಸೌಕರ್ಯದ ಕೊರತೆ ಮತ್ತು ಭದ್ರತೆಗೆ ತೊಡಕು ಉಂಟಾಗುತ್ತಿದೆ.ಆದ್ದರಿಂದ, ವಿಶ್ವವಿದ್ಯಾಲಯದಲ್ಲಿ ಸೌಹಾರ್ದತೆ, ಶಿಸ್ತು ಹಾಗೂ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಹಿತದೃಷ್ಟಿಯಿಂದ ಅನಧಿಕೃತ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳನ್ನು ಕೂಡಲೇ ಗುರುತಿಸಿ ಹೊರ ಹಾಕಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕುಲಸಚಿವರು ವಿದ್ಯಾರ್ಥಿನಿಲಯದ ಕ್ಷೇಮಪಾಲಕರಿಗೆ ಕಟ್ಟನಿಟ್ಟಿನ ಸೂಚನೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.