ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಭೂ ಸಂಬಂಧಿ ವಿಷಯಗಳ ಕುರಿತ ದಾವೆಗಳ ಕರ್ತವ್ಯ ನಿರ್ವಹಿಸಲು ಪ್ರಥಮ ದರ್ಜೆ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಭೂಮಾಪನ ಕಾಯ್ದೆ, ನಿಯಮಗಳು ಹಾಗೂ ಮೋಜಣಿ, ಭೂಮಿ ಹಾಗೂ ಇತರೆ ಭೂ ಸಂಬಂಧಿತ ತಂತ್ರಾಂಶದ ಬಗ್ಗೆ ಜ್ಞಾನವಿರಬೇಕು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಇದೇ 15 ಕೊನೆಯ ದಿನ. ಹುದ್ದೆಯ ವಿವರ ಹಾಗೂ ಇನ್ನಿತರೆ ಮಾಹಿತಿಗೆ, www.bangaloreuniversity.ac.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಬ್ಯಾಕ್‌ಲಾಗ್ ನೇಮಕಾತಿ: ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಮತ್ತು ಯುವಿಸಿಇ ಕಾಲೇಜಿನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇವು ಬ್ಯಾಕ್‌ಲಾಗ್ ಹುದ್ದೆಗಳಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ಇನ್ನಿತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.bangaloreuniversity.ac.inನಿಂದ ಪಡೆಯಬಹುದು ಎಂದು ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ.
ಪಿಎಚ್.ಡಿ ಸೀಟು ಹಂಚಿಕೆ: ಕೌನ್ಸೆಲಿಂಗ್ 20ಕ್ಕೆ
ಬೆಂಗಳೂರು: 2019ರಲ್ಲಿ ಪಿಎಚ್.ಡಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳಲ್ಲಿನ ಮಾರ್ಗದರ್ಶಕ ಬಳಿ ಬಾಕಿ ಉಳಿದಿರುವ ಸೀಟುಗಳ ಹಂಚಿಕೆಗಾಗಿ ಇದೇ 20ರಂದು ಎರಡನೇ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ.
ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಗಳಲ್ಲಿ ಅಂದು ಬೆಳಿಗ್ಗೆ 9.30ಕ್ಕೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಯದ ಪ್ರಕಟಣೆ ತಿಳಿಸಿದೆ.
ಮೊದಲನೇ ಸುತ್ತಿನ ಪ್ರವೇಶ ಪ್ರಕ್ರಿಯೆಯಲ್ಲಿ ಗೈರು ಹಾಜರಾದ ಮತ್ತು ಸೀಟುಗಳು ಹಂಚಿಕೆಯಾಗದ ಅರ್ಜಿದಾರರು ಈ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬಹುದಾಗಿದೆ ಎಂದು ಅದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.