ಶುಕ್ರವಾರ, ಜುಲೈ 1, 2022
27 °C
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಿಸಲು ಒತ್ತಾಯ:

ಕುಲಪತಿ ನೇಮಿಸಲು ಒತ್ತಾಯ: ತರಗತಿ ಬಹಿಷ್ಕರಿಸಿದ ಬೆಂ.ವಿವಿ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಿಸುವಂತೆ ಒತ್ತಾಯಿಸಿ ಜ್ಞಾನ ಭಾರತಿ ಆವರಣದ ವಿದ್ಯಾರ್ಥಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿಗೆ ತರಗತಿಗಳನ್ನು ಬಹಿಷ್ಕರಿಸಿದ್ದಾರೆ.

ಸ್ನಾತಕೋತ್ತರ ವಿದ್ಯಾರ್ಥಿನಿಲಯದಿಂದ ಆಡಳಿತ ಕಚೇರಿ ಕಟ್ಟಡದವರೆಗೆ ವಿದ್ಯಾರ್ಥಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.

ಪ್ರತಿಭಟನೆ ಜತೆಗೆ ಕುಲಪತಿ ಅವರನ್ನು ನೇಮಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆಯುವ ಅಭಿಯಾನವನ್ನು ಆರಂಭಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು