ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿ.ವಿ: ದೇಗುಲಕ್ಕೆ ವಿದ್ಯಾರ್ಥಿಗಳ ವಿರೋಧ

Last Updated 8 ಸೆಪ್ಟೆಂಬರ್ 2022, 2:22 IST
ಅಕ್ಷರ ಗಾತ್ರ

ಬೆಂಗಳೂರು: ಜ್ಞಾನ ಭಾರತಿ ಆವರಣದಲ್ಲಿ ಗಣೇಶ ದೇವಸ್ಥಾನದ ನಿರ್ಮಾಣ ವಿರೋಧಿಸಿಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ತಕ್ಷಣವೇ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

‘ವಿಶ್ವವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಯಾರು ಅನುಮತಿ ನೀಡಿದ್ದಾರೆ ಎನ್ನುವುದು ನಮಗೂ ತಿಳಿದಿಲ್ಲ. ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಲಿ. ಇದರಿಂದ, ವಿದ್ಯಾರ್ಥಿಗಳಿಗೂ ಅನುಕೂಲ’ ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು, ‘ಇದು ಹೊಸ ದೇವಸ್ಥಾನವಲ್ಲ. ದೇವಸ್ಥಾನವನ್ನು ಸ್ಥಳಾಂತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

‘ಕೆ.ಆರ್‌. ವೇಣುಗೋಪಾಲ್‌ ಅವರು ಕುಲಪತಿಯಾಗಿದ್ದ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆವರಣದಲ್ಲಿ ಈಗಾಗಲೇ ಸಭಾಂಗಣದ ಪಕ್ಕ ಇರುವ ದೇವಸ್ಥಾನವುರಸ್ತೆ ವಿಸ್ತರಣೆ ಯೋಜನೆ ಸಂದರ್ಭದಲ್ಲಿ ಒಡೆದು ಹಾಕಲಾಗುತ್ತದೆ. ಹೀಗಾಗಿ, ದೇವಸ್ಥಾನದ ಮರುನಿರ್ಮಾಣ ಅಥವಾ ಸ್ಥಳಾಂತರಕ್ಕೆ ಹಿಂದಿನ ಕುಲಪತಿ ಅವರು ಒಪ್ಪಿಗೆ ಸೂಚಿಸಿದ್ದರು. ಜತೆಗ ಸ್ಥಳವನ್ನು ಸಹ ಅಂತಿಮಗೊಳಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT