ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಿಶೇಷಾಧಿಕಾರಿ ಪ್ರೊ. ಕೃಷ್ಣಮೂರ್ತಿ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿ ಎಸ್.ಸಿ/ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ₹10,000 ಫೆಲೋಶಿಪ್ ಅನ್ನು ತಕ್ಷಣವೇ ಹೆಚ್ಚಿಸುವಂತೆ ಮನವಿ ಮಾಡಿತು.

ಫೆಲೋಶಿಪ್ ಹಣವನ್ನು ಇಲಾಖೆಯ ಡಿಬಿಟಿ ವ್ಯವಸ್ಥೆಯ ಮೂಲಕ ನೀಡುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದರಿಂದ ವಿಳಂಬ, ಗೊಂದಲಗಳು ಉಂಟಾಗುತ್ತಿವೆ. ಸಹಾಯಧನದ ಮೇಲೆ ಅವಲಂಬನೆ ಆಗಿರುವ ಎಸ್.ಸಿ/ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ತಕ್ಷಣವೇ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಮನವಿಯನ್ನು ಪರಿಗಣಿಸುವುದಾಗಿ ಭರವಸೆ ನೀಡಿದರು.

ಒಕ್ಕೂಟದ ಅಧ್ಯಕ್ಷ ಅರ್ಜುನ್, ಉಪಾಧ್ಯಕ್ಷ ಚಂದ್ರುಮಿಡ್ಲುಮುನಿ, ಬಸವರಾಜ್ ಮುಸಲಾಪುರ, ಗೋಪಾಲಕೃಷ್ಣ ಕೆ.ಎ, ರವಿಕುಮಾರ್, ಅನಿಲ್ ಕುಮಾರ್.ವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.