ಮಂಗಳವಾರ, ಮಾರ್ಚ್ 28, 2023
26 °C

ಬಾಂಗ್ಲಾ– ಬೆಂಗಳೂರು ವಿ.ವಿ. ನಡುವೆ ಶೈಕ್ಷಣಿಕ ಸಹಯೋಗ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಬಾಂಗ್ಲಾದೇಶದ ಉಪ ಹೈಕಮಿಷನರ್ ಡಾ. ಶೆಲ್ಲಿ ಸಲೇಹಿನ್ ಅವರು ಶೈಕ್ಷಣಿಕ ಸಹಯೋಗ ಕಾರ್ಯಕ್ರಮದ ಯೋಜನೆಗಾಗಿ ಭೇಟಿ ನೀಡಿ ವಿಶ್ವವಿದ್ಯಾಲಯದ ಕುಲಪತಿ
ಪ್ರೊ. ಎಸ್‌.ಎಂ. ಜಯಕರ, ಕುಲಸಚಿವ ಎನ್. ಮಹೇಶ್ ಬಾಬು ಮತ್ತು ಪ್ರಾಧ್ಯಾಪಕರೊಂದಿಗೆ ಸಮಾಲೋಚನೆ ನಡೆಸಿದರು.

ಬಾಂಗ್ಲಾದೇಶದ ವಿಶ್ವವಿದ್ಯಾಲಯಗಳು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಅಭಿವೃದ್ಧಿ ಕಾರ್ಯಕ್ರಮಗಳು, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳು, ವಿವಿಧ ವಿಭಾಗಗಳಲ್ಲಿ ಜಂಟಿ ಸಂಶೋಧನಾ ಚಟುವಟಿಕೆ ಮತ್ತು ಇ-ಆಧಾರಿತ ಶೈಕ್ಷಣಿಕ ಸಂಪನ್ಮೂಲಗಳ ವಿನಿಮಯವನ್ನು ಉತ್ತೇಜಿಸಲು ಈ ಸಂದರ್ಭದಲ್ಲಿ ಒಪ್ಪಿಗೆ ಸೂಚಿಸಲಾಯಿತು.

ಬಾಂಗ್ಲಾದೇಶ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವಿನ ಸಂಭಾವ್ಯ ಸಹಯೋಗಗಳ ಬಗ್ಗೆ ವಿವರಗಳನ್ನು ಅಂತಿಮಗೊಳಿಸಲು ಇನ್ನೂ ಹೆಚ್ಚಿನ ಚರ್ಚೆಗಳನ್ನು ಕೈಗೊಳ್ಳಬೇಕು ಹಾಗೂ ಅಂತಹ ಸಹಯೋಗಗಳಿಂದ ಪರಸ್ಪರ ಪ್ರಯೋಜನಗಳನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಮ್ಮತಿಸಲಾಯಿತು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ಎಂ. ಜಯಕರ ಮಾತನಾಡಿ, ಜಾಗತಿಕ ವಿದ್ವಾಂಸರ ಸಮುದಾಯವನ್ನು ರಚಿಸುವ ಸಲುವಾಗಿ ಶೈಕ್ಷಣಿಕ ಪಾಲುದಾರಿಕೆಗಳ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಅಂತರಾಷ್ಟ್ರೀಯ ಸಹಯೋಗವನ್ನು ಉತ್ತೇಜಿಸುವ ಸಲುವಾಗಿ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ತೆಗೆದುಕೊಂಡಿರುವ ವಿವಿಧ ಕ್ರಮಗಳನ್ನು ಅವರು ಈ ಸಂದರ್ಭದಲ್ಲಿ ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು