ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ವೇದಿಕೆ ಹಾಗೂ ಪಿಎಂ ಉಷಾ ಸಹಯೋಗದೊಂದಿಗೆ ಜ್ಞಾನಭಾರತಿ ಆವರಣದಲ್ಲಿ ಇದೇ 17 ಮತ್ತು 18ರಂದು ವಿಜ್ಞಾನ ಉತ್ಸವ-2026 ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದಲ್ಲಿ ವಿಶ್ವವಿದ್ಯಾಲಯದಲ್ಲಿರುವ ಆರು ಸ್ನಾತಕೋತ್ತರ ವಿಜ್ಞಾನ ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳು ನಡೆಯಲಿವೆ. ವಿಜ್ಞಾನಿಗಳು ಮತ್ತು ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಅಲ್ಲದೆ ಸಂಶೋಧನೆ, ವಿಜ್ಞಾನ ಕ್ಷೇತ್ರದ ಹೊಸ ಅನ್ವೇಷಣೆಗಳ ಕುರಿತು ಚರ್ಚೆಗಳು ನಡೆಯಲಿವೆ.

ವಿಜ್ಞಾನಿಗಳು ಮತ್ತು ಸಂಶೋಧಕರೊಂದಿಗೆ ಸಂವಾದ ನಡೆಸಲು ಅವಕಾಶ ಇದೆ. ವಿಜ್ಞಾನ ವಿಭಾಗಗಳಲ್ಲಿ ವಿಜ್ಞಾನ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಸಂಶೋಧಕರು ರೂಪಿಸಿರುವ ವಿಜ್ಞಾನದ ಮಾದರಿಗಳು, ಸಂಶೋಧನಾ ಪೋಸ್ಟರ್ಗಳು ಹಾಗೂ ಹೊಸ ವೈಜ್ಞಾನಿಕ ಯೋಜನೆಗಳ ಮಾಹಿತಿ ಲಭ್ಯವಾಗಲಿವೆ.

ವಿಜ್ಞಾನ ವಿಭಾಗಗಳಲ್ಲಿರುವ ಸಂಗ್ರಹಾಲಯಗಳ ವೀಕ್ಷಣೆಗೆ ಮುಕ್ತ ಅವಕಾಶವಿದ್ದು ಸಸ್ಯವಿಜ್ಞಾನ, ಪ್ರಾಣಿವಿಜ್ಞಾನ ಮತ್ತು ಭೂವಿಜ್ಞಾನ ವಿಭಾಗಗಳ ಸಂಗ್ರಹಾಲಯಗಳಲ್ಲಿ ಜೀವ ವೈವಿಧ್ಯ ಸಂಗ್ರಹಗಳು, ವಿವಿಧ ಜೀವಿಗಳ ಮಾದರಿಗಳು ಹಾಗೂ ಭೂವೈಜ್ಞಾನಿಕ ಪ್ರದರ್ಶನಗಳನ್ನು ನೋಡುವ ಅವಕಾಶ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ವಿಜ್ಞಾನ ಉತ್ಸವವು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವ ಮಹತ್ವದ ಕಾರ್ಯಕ್ರಮವಾಗಿದೆ. ಸಂಶೋಧನೆ ಹಾಗೂ ನಾವೀನ್ಯತೆಯನ್ನು ಉತ್ತೇಜಿಸಲಿದ್ದು ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕುಲಪತಿ ಎಸ್.ಎಂ.ಜಯಕರ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.