ಬೆಂಗಳೂರು: ಡ್ರಗ್ಸ್ ಮಾರಾಟ, ಪೂರೈಕೆಯ ವಿರುದ್ಧ ನಗರದ ವಿವಿಧ ಠಾಣೆ ಪೊಲೀಸರು ಹಾಗೂ ಸಿಸಿಬಿ ಘಟಕದ ಸಿಬ್ಬಂದಿ(ಮಾದಕ ದ್ರವ್ಯ ನಿಗ್ರ ದಳ) ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ ನಗರದಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಬಿದ್ದಿಲ್ಲ.

ಮಾದಕ ವಸ್ತುಗಳ ಪೂರೈಕೆಗೆ ಪೆಡ್ಲರ್ಗಳು ಹಲವು ಉಪಾಯ ಕಂಡುಕೊಂಡಿದ್ದಾರೆ. ಪೊಲೀಸರೂ ಅಷ್ಟೇ ವೇಗದಲ್ಲಿ ಡ್ರಗ್ಸ್ ದಂಧೆಕೋರರನ್ನು ಮಟ್ಟಹಾಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದೆರಡು ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಹೆಚ್ಚಿನ ಮೊತ್ತದ ಡ್ರಗ್ಸ್ ವಶಕ್ಕೆ ಪಡೆಯುವಲ್ಲಿ ನಗರದ ಪೊಲೀಸರು ಯಶಸ್ವಿ ಆಗಿದ್ದಾರೆ.

ವರ್ಷಾಂತ್ಯದಲ್ಲಿ ನಡೆಯುವ ಪಾರ್ಟಿಗಳಿಗೆ ನೈಸರ್ಗಿಕ ಹಾಗೂ ಸಿಂಥೆಟಿಕ್ ಡ್ರಗ್ಸ್ ಪೂರೈಕೆ ಆಗುವ ಮಾಹಿತಿ ಸಿಕ್ಕಿದ್ದು, ಒಂದು ತಿಂಗಳಿಂದ ಪೊಲೀಸರ ಕಾರ್ಯಾಚರಣೆ ಚುರುಕು ಪಡೆದುಕೊಂಡಿದೆ.

ಆಂಧ್ರಪ್ರದೇಶ, ತೆಲಂಗಾಣ, ದೆಹಲಿಯಿಂದ ಸಿಂಥೆಟಿಕ್ ಡ್ರಗ್ಸ್ ಬೆಂಗಳೂರಿಗೆ ಪೂರೈಕೆಯಾಗುವ ಮಾಹಿತಿ ಸಿಕ್ಕಿದ್ದು, ಪೆಡ್ಲರ್ಗಳ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ. ಮಾದಕ ವಸ್ತುಗಳ ಮುಕ್ತ ನಗರ ಮಾಡಲು ಪೊಲೀಸರು ಪಣ ತೊಟ್ಟಿದ್ದಾರೆ.

2023ರಲ್ಲಿ ₹103.32 ಕೋಟಿ ಮೌಲ್ಯದ ಡ್ರಗ್ಸ್ ಹಾಗೂ 2024ರಲ್ಲಿ ₹98.83 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಈ ವರ್ಷ(ಡಿಸೆಂಬರ್ 9ರವರೆಗೆ) ₹162.87 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ನಗರ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ. ಆ ಪೈಕಿ ಸಿಸಿಬಿ ಪೊಲೀಸರೇ ₹120 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಪೆಡ್ಲರ್ಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಪಾರ್ಟಿಗಳ ಮೇಲೆ ನಿಗಾ:
ಹೊಸ ವರ್ಷದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಪೂರೈಸಲು ಸಂಗ್ರಹಿಸಿಕೊಂಡಿದ್ದ ₹37 ಕೋಟಿ ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ಅನ್ನು ಕಳೆದ 15 ದಿನಗಳಲ್ಲಿ ಸಿಸಿಬಿಯ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. 10 ಮಂದಿ ಪೆಡ್ಲರ್ಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ವರ್ಷಾಂತ್ಯದಲ್ಲಿ ನಗರದಲ್ಲಿ ಇರುವ ಪಬ್, ಹೊರವಲದಲ್ಲಿರುವ ಹೋಮ್ ಸ್ಟೇಗಳು, ಸ್ಟಾರ್ ಹೋಟೆಲ್ಗಳ ಆವರಣದಲ್ಲಿ ವಿಶೇಷ ಪಾರ್ಟಿಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಈ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ದಾಸ್ತಾನು ಮಾಡಿಕೊಂಡಿದ್ದ ಕೇಂದ್ರಗಳ ಮೇಲೂ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಅಂಚೆ ಕಚೇರಿಯಿದ್ದು, ಅಲ್ಲಿಗೆ ಥಾಯ್ಲೆಂಡ್ನಿಂದ ಬಂದಿದ್ದ ಪಾರ್ಸಲ್ಗಳಲ್ಲಿ ಹೈಡ್ರೊಗಾಂಜಾ ಇರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

‘ಪೆಡ್ಲರ್ಗಳು ಹೊಸ ಹೊಸ ಸಂಚು ರೂಪಿಸಿಕೊಂಡು ಮಾದಕ ವಸ್ತುಗಳನ್ನು ಸಾಗಣೆ ಮಾಡುತ್ತಿದ್ದಾರೆ. ಚಾಕೊಲೇಟ್, ಕಾಫಿ–ಟೀ ಪುಡಿ, ಗಿಫ್ಟ್ ಬಾಕ್ಸ್, ಆಹಾರ ಪದಾರ್ಥಗಳ ಪೊಟ್ಟಣಗಳಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಣೆ ಮಾಡುತ್ತಿರುವುದು ಕಂಡುಬಂದಿದೆ. 18ರಿಂದ 35 ವರ್ಷದ ಒಳಗಿನವರನ್ನೇ ಗುರಿಯಾಗಿಸಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ನಿಯಂತ್ರಣಕ್ಕೆ ಪೊಲೀಸರ ಕ್ರಮ

ಜೈಲಿನಿಂದ ಬಿಡುಗಡೆಯಾದ ಆರೋಪಿಗಳ ಮೇಲೆ ನಿರಂತರ ಮೇಲ್ವಿಚಾರಣೆ

ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿರುವ ವಿದೇಶಿ ಪ್ರಜೆಗಳ ಪತ್ತೆಹಚ್ಚಿ, ಬಂಧನ

ಶಾಲಾ–ಕಾಲೇಜುಗಳಲ್ಲಿ ಡ್ರಗ್ಸ್ ವಿರುದ್ಧ ಅಭಿಯಾನ, ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ

ಗುಪ್ತಚರ ಮಾಹಿತಿ ಹಾಗೂ ತಾಂತ್ರಿಕ ಮೂಲಗಳನ್ನು ಬಳಸಿಕೊಂಡು ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವ ಕೆಲಸ ನಿರಂತರವಾಗಿ ಸಾಗುತ್ತಿದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಜಪ್ತಿ ಮಾಡಲಾಗಿದೆ
ಸೀಮಾಂತ್ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್

62 ವಿದೇಶಿ ಪೆಡ್ಲರ್ಗಳ ಸೆರೆ

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 62 ವಿದೇಶಿ ಪ್ರಜೆಗಳನ್ನು ಈ ವರ್ಷ ಬಂಧಿಸಲಾಗಿದೆ. 2023ರಲ್ಲಿ 101 ಹಾಗೂ 2024ರಲ್ಲಿ 61 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಶಿಕ್ಷಣ ಹಾಗೂ ಪ್ರವಾಸಿ ವೀಸಾದ ಮೇಲೆ ನಗರಕ್ಕೆ ಬಂದು ಅವಧಿ ಮುಕ್ತಾಯವಾದ ಮೇಲೂ ನಗರದಲ್ಲಿಯೇ ನೆಲಸಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.