ಬುಧವಾರ, ಜೂನ್ 23, 2021
28 °C

ಬಿಬಿಎಂಪಿ ಸದಸ್ಯರ ಹೇಳಿಕೆ ಪಡೆದ ಸಿಸಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಲಭೆ ಪ್ರಕರಣದ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಸಂಬಂಧ ಬಿಬಿಎಂಪಿ ಸದಸ್ಯರಾದ ಸಂಪತ್ ರಾಜ್ ಹಾಗೂ ಜಾಕಿರ್ ಅವರನ್ನು ಸಿಸಿಬಿ ಪೊಲೀಸರು ಮಂಗಳವಾರ ವಿಚಾರಣೆ ನಡೆಸಿದ್ದಾರೆ.

ಸೋಮವಾರ ನೋಟಿಸ್‌ ಪಡೆದಿದ್ದ ಇಬ್ಬರೂ ಮಂಗಳವಾರ ಬೆಳಿಗ್ಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದು ತನಿಖಾಧಿಕಾರಿ ಎದುರು ಹಾಜರಾದರು. ಆರು ಗಂಟೆ ವಿಚಾರಣೆ ನಡೆಸಿದ ಅಧಿಕಾರಿಗಳು, ಲಿಖಿತ ಹೇಳಿಕೆ ಪಡೆದು ವಾಪಸ್ ಕಳುಹಿಸಿದರು.

‘ಶಾಸಕರ ವಿರುದ್ಧ ಪ್ರತಿಭಟನೆಗೆ ಹಾಗೂ ಗಲಭೆಗೆ ಕುಮ್ಮಕ್ಕು ನೀಡಿಲ್ಲ. ಗಲಭೆ ಬಗ್ಗೆ ವಾರ್ಡ್‌ನ ಕೆಲ ಯುವಕರು ನಮಗೆ ಕರೆ ಮಾಡಿ ಮಾತಾಡಿರುವುದು ನಿಜ. ಗಲಭೆಗೆ ನಾವು ಕುಮ್ಮಕ್ಕು ನೀಡುವ ಮಾತಾಡಿಲ್ಲ. ನಮ್ಮ ಜತೆ ಸಂಪರ್ಕದಲ್ಲಿದ್ದ ಯುವಕರು ಗಲಭೆಯಲ್ಲಿ ತೊಡಗಿರಬಹುದು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ’ ಎಂದು ಪಾಲಿಕೆ ಸದಸ್ಯರಿಬ್ಬರು 20 ಪುಟಗಳ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು