ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಮಂಡಳಿಗೆ ಜೈಕಾ ₹ 2391 ಕೋಟಿ ಸಾಲ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ಸಾಲ
Last Updated 31 ಮಾರ್ಚ್ 2022, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕೈಗೊಳ್ಳಲು ‘ಜಪಾನ್ ಇಂಟರ್ ನ್ಯಾಷನಲ್ ಕಾರ್ಪೋರೇಷನ್ ಏಜೆನ್ಸಿ’ (ಜೈಕಾ) ಜಲಮಂಡಳಿಗೆ ₹2,391 ಕೋಟಿ ಸಾಲ ಮಂಜೂರು ಮಾಡಿದೆ.

ಇದಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಮೂರನೇ ಹಂತದ ಕುಡಿಯುವ ನೀರು ಯೋಜನೆಗೆ ಈ ಸಾಲ ನೀಡಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೂ ನೀರು ಪೂರೈಕೆಗೆ ಹಣ ವಿನಿಯೋಗಿಸಲು ಉದ್ದೇಶಿಸಲಾಗಿದೆ.

ಈ ಯೋಜನೆ ಅಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುರಕ್ಷಿತ ಮತ್ತು ಸುಸ್ಥಿರವಾದ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆ ಮತ್ತು ನೀರು ಶುದ್ಧೀಕರಣ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ 110 ಗ್ರಾಮಗಳೂ ಸೇರಿದ್ದು, ಇದರಿಂದ ಸುಮಾರು 35 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ಯೋಜನೆಯಿಂದಾಗಿ ನಗರದ ನಾಗರಿಕರ ಜೀವನ ಮಟ್ಟವನ್ನು ಸುಧಾರಣೆ ಮಾಡುವ ಜತೆಗೆ, ಬಿಬಿಎಂಪಿ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ವಾತಾವರಣವನ್ನು ಉತ್ತೇಜನ ದೊರೆತಂತಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಜೆಐಸಿಎ ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆಗಳಿಗೆ ನೆರವಾಗುತ್ತಲೇ ಬಂದಿದೆ. ಅದೇ ರೀತಿ ಬೆಂಗಳೂರು ಜಲಮಂಡಳಿಗೆ 1996ರಿಂದ 1 ಮತ್ತು 2 ನೇ ಹಂತದ ಯೋಜನೆಗಳಿಗೆ ಆರ್ಥಿಕ ನೆರವು ನೀಡಿದೆ. ಇದೀಗ 3ನೇ ಹಂತದ ಯೋಜನೆಗೂ ನೆರವಿನ ಹಸ್ತ ಚಾಚುವ ಮೂಲಕ ಪರಿಣಾಮಕಾರಿಯಾಗಿ ಯೋಜನೆಯನ್ನು ಕಾರ್ಯಗತಗೊಳಿಸಲು ನೆರವಾಗುತ್ತಿದೆ.

ಈ ಸಾಲ ಒಪ್ಪಂದಕ್ಕೆ ಹಣಕಾಸು ಇಲಾಖೆಯ ಆರ್ಥಿಕ ವ್ಯವಹಾರಗಳ ಹೆಚ್ಚುವರಿ ಕಾರ್ಯದರ್ಶಿ ರಜತ್ ಕುಮಾರ್ ಮಿಶ್ರಾ ಮತ್ತು ಭಾರತದಲ್ಲಿ ಜೆಐಸಿಎ ಮುಖ್ಯ ಪ್ರತಿನಿಧಿ ಸೈಟೋ ಮಿಟ್ಸುನೊರಿ ಸಹಿ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT