ಬೆಂಗಳೂರು: ಜಿಟಿಜಿಟಿ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ನಗರದಲ್ಲಿ ತಾಪಮಾನ ತಗ್ಗಿದ್ದು, ಆಗಾಗ ಬೀಸುವ ಶೀತ ಗಾಳಿಯಿಂದ ವಾತಾವರಣದಲ್ಲಿ ಚಳಿ ಕಾಣಿಸಿಕೊಂಡಿದೆ.

ಕಳೆದೊಂದು ವಾರದಿಂದ ದಿನದ ಬಹುತೇಕ ಅವಧಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಉಷ್ಣಾಂಶದಲ್ಲಿ ಕುಸಿತವಾಗುತ್ತಿದೆ. ಬುಧವಾರ ಮಧ್ಯಾಹ್ನ 1 ಗಂಟೆಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಸಿಯಸ್ ವರದಿಯಾದರೆ, ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ನಾಲ್ಕರಿಂದ ಐದು ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗಿದೆ. ಈ ಅವಧಿಯಲ್ಲಿ ಸಾಮಾನ್ಯವಾಗಿ ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್ನಿಂದ 29 ಡಿಗ್ರಿ ಸೆಲ್ಸಿಯಸ್ ಇರುತ್ತಿತ್ತು.

ದಿನದ ಕೆಲವು ಅವಧಿ ಗಂಟೆಗೆ 30 ಕಿ.ಮೀ.ಯಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಇದರಿಂದಾಗಿಯೂ ವಾತಾವರಣದಲ್ಲಿ ಚಳಿ ಹೆಚ್ಚುತ್ತಿದೆ. ನಗರದ ಮೂರು ಸ್ಥಳಗಳಲ್ಲಿ ತಾಪಮಾನ ಕೇಂದ್ರಗಳಿವೆ. ಎಚ್ಎಎಲ್, ಬೆಂಗಳೂರು ನಗರ ಪ್ರದೇಶ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೀಕ್ಷಣಾಲಯವಿದ್ದು, ಹವಾಮಾನ ಇಲಾಖೆಯ ಪ್ರಕಾರ, ಕಳೆದ ವಾರ ಸರಾಸರಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ವರದಿಯಾಗಿತ್ತು.

ನಗರದಲ್ಲಿ ಇದೇ 26ರವರೆಗೂ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ತೀವ್ರತೆ ಕಡಿಮೆಯಾಗಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.