ಭಾನುವಾರ, ಆಗಸ್ಟ್ 14, 2022
28 °C
ಇಬ್ಬರ ಸೆರೆ

ಮತ್ತೊಂದು ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ: ₹50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Drugs mafia

ಬೆಂಗಳೂರು: ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಮತ್ತೊಂದು ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

‘ಇತ್ತೀಚೆಗಷ್ಟೇ ಕೆಂಪೇಗೌಡ ನಗರ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಪಾರ್ಸೆಲ್ ಪತ್ತೆ ಮಾಡಿ ಜಾಲದ ಆರೋಪಿಗಳನ್ನು ಬಂಧಿಸಲಾಗಿತ್ತು. ಅದೇ ಜಾಲದ ರೀತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮತ್ತೊಂದು ಜಾಲದ ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ರಾಹುಲ್ ಹಾಗೂ ದರ್ಶನ್ ಬಂಧಿತರು. ಇವರಿಬ್ಬರು ಪೋಲೆಂಡ್‌ನಿಂದ ಡ್ರಗ್ಸ್ ತರಿಸುತ್ತಿದ್ದರು. ಅವರಿಂದ  ₹50 ಲಕ್ಷ ಮೌಲ್ಯದ 1000 ಎಲ್‌ಎಸ್‌ಡಿ ಕಾಗದ ತುಣುಕುಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

‘ಡಾರ್ಕ್‌ನೆಟ್ ಮೂಲಕ ಅಂತರರಾಷ್ಟ್ರೀಯ ಪೆಡ್ಲರ್ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪಿಗಳು, ಬಿಟ್ ಕಾಯಿನ್ ಬಳಸಿ ಡ್ರಗ್ಸ್ ಖರೀದಿ ಮಾಡುತ್ತಿದ್ದರು. ಅಂಚೆ ಮೂಲಕ ತರಿಸಿಕೊಂಡು, ನಗರದಲ್ಲಿ ಸ್ನೇಹಿತರು, ಕೆಲ ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದರು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಮತ್ತಷ್ಟು ವಿಚಾರಣೆ ನಡೆಸಬೇಕಿದೆ’ ಎಂದೂ ಅಧಿಕಾರಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು