ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Published 14 ಮಾರ್ಚ್ 2024, 15:51 IST
Last Updated 14 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ನಾಗರಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುವಂತೆ ಆಗ್ರಹಿಸಿ ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು  ಖಾಲಿಕೊಡಗಳನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಬೆಂಗಳೂರು ನಗರದಲ್ಲಿ ವಾಸಿಸುವ ಎಲ್ಲ ನಿವಾಸಿಗಳಿಗೆ ಅಗತ್ಯವಿರುವಷ್ಟು ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಆಗಾಗ್ಗೆ ಉದ್ಭವಿಸುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು‘ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

‘ನಗರದ ಕೆರೆಗಳು ಹಾಗೂ ರಾಜಕಾಲುವೆಗಳಲ್ಲಿ ಆಗಿರುವ ಒತ್ತುವರಿ ತೆರವುಗೊಳಿಸಿ, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿದರು.

‘ನಗರದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ನಿವಾಸಿಗಳು ತಮ್ಮ ಮನೆಗಳಿಗೆ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT