ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ವರ್ಷದ ಬಳಿಕ ಸಿಕ್ಕಿಬಿದ್ದ ಬಾಂಗ್ಲಾ ಪ್ರಜೆ

Last Updated 8 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಎರಡು ವರ್ಷದವನಿದ್ದಾಗ ಪೋಷಕರ ಜೊತೆ ದೇಶದೊಳಗೆ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶದ ರಮೇನ್ ಬಿಸ್ವಾಸ್ ಎಂಬಾತ 30 ವರ್ಷದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

‘ಮಾಲ್ಡೀವ್ಸ್‌ನಿಂದ ಗಡಿಪಾರು ಮಾಡಲಾಗಿದ್ದ ರಮೇನ್, ಶ್ರೀಲಂಕಾದ ಮೂಲಕ ವಿಮಾನದಲ್ಲಿ ನಗರಕ್ಕೆ ಬಂದಿದ್ದ. ಪಾಸ್‌ಪೋರ್ಟ್‌ ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಆತ ಬಾಂಗ್ಲಾದೇಶದ ಪ್ರಜೆ ಎಂಬುದು ಗೊತ್ತಾಗಿದೆ’ ಎಂದು ಕೆಐಎ ಪೊಲೀಸರು ಹೇಳಿದರು.

‘ವಲಸೆ ಅಧಿಕಾರಿಗಳೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದಾರೆ. ವಿದೇಶಿಗರ ಕಾಯ್ದೆ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಬಾಂಗ್ಲಾದೇಶದ ಫಾರಿದ್‌ಪುರದಲ್ಲಿ ಜನಿಸಿದ್ದ ರಮೇನ್ ಬಿಸ್ವಾಸ್ ಹಾಗೂ ಆತನ ಪೋಷಕರು ಗಡಿ ದಾಟಿ ಭಾರತದೊಳಗೆ ಬಂದಿದ್ದರು. ಬೀದಿ ಬದಿಯಲ್ಲಿ ಆಹಾರ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಆರೋಪಿ ರಮೇನ್, ಏಜೆಂಟರೊಬ್ಬರಿಗೆ ₹ 80,000 ಕೊಟ್ಟು ಮಾಲ್ಡೀವ್ಸ್‌ನಲ್ಲಿ ಹೊಸ ಕೆಲಸ ಹುಡುಕಿ ಹೊರಟಿದ್ದ’

‘ಮಾಲ್ಡೀವ್ಸ್‌ನ ವಲಸೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದಿದ್ದ. ಹೀಗಾಗಿಯೇ ಆತನನ್ನು ಅಲ್ಲಿಂದ ಗಡಿಪಾರು ಮಾಡಲಾಗಿತ್ತು’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT