ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Last Updated 20 ಮೇ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಬಾಂಗ್ಲಾದೇಶದ 23 ವರ್ಷದ ಯುವತಿಯ ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲ್ಬೆರಳು ತುರುಕಿ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ 2021ರ ಮೇ 27ರಂದು ನಡೆದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ 54ನೇ ಸಿಸಿಎಚ್‌ ನ್ಯಾಯಾಲಯ, ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಯುವತಿ ಮೇಲಿನ ಕ್ರೌರ್ಯದ ದೃಶ್ಯವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದ ಆರೋಪಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಅದೇ ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿನಗರ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

‘ಪ್ರಮುಖ ಅಪರಾಧಿಗಳಾದ ಸೊಬುಜ್, ಹೃದಾಯ್ ಬಾಬು, ರಫ್ಸಾನ್ ಮಂಡಲ್, ರಾಕಿಬುಲ್ ಇಸ್ಲಾಂ ಸಾಗರ್, ಮೊಹಮ್ಮದ್ ಬಾಬು, ದಲೀಂ ಹಾಗೂ ಅಜೀಮ್‌ನನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ತಾನೀಯಾ ಖಾನಂ ಎಂಬಾಕೆಗೆ 20 ವರ್ಷ ಹಾಗೂ ಜಮಾಲ್‌ನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ನುಸ್ರತ್ ಹಾಗೂ ಕಾಜಲ್‌ಗೆ ತಲಾ 9 ತಿಂಗಳು ಜೈಲು ಶಿಕ್ಷೆ ಆಗಿದೆ’ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ಹೇಳಿದರು.

ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಯತ್ನ: ‘ಬಾಂಗ್ಲಾದೇಶದ ಯುವತಿ, ಸಂಬಂಧಿ ಹಾಗೂ ಪರಿಚಯಸ್ಥರ ಜೊತೆ ಭಾರತಕ್ಕೆ ಬಂದಿದ್ದರು. ಅವರನ್ನು ಬರಮಾಡಿಕೊಂಡಿದ್ದ ಆರೋಪಿಗಳು, ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೊಠಡಿಯೊಂದರಲ್ಲಿ ಇರಿಸಿದ್ದರು. ಯುವತಿಯನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಯುವತಿ ಒಪ್ಪಿರಲಿಲ್ಲ’ ಎಂದು ಪೊಲೀಸರು ಹೇಳಿದರು.

‘ಆಕ್ರೋಶಗೊಂಡ ಆರೋಪಿಗಳು, ಯುವತಿಯನ್ನು ನಗ್ನಗೊಳಿಸಿ, ಗುಪ್ತಾಂಗದೊಳಗೆ ಮದ್ಯದ ಬಾಟಲಿ ಹಾಗೂ ಕಾಲು ಬೆರಳುಗಳನ್ನು ಹಾಕಿ ಮೃಗೀಯವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಯುವತಿ, ಸ್ನೇಹಿತರೊಬ್ಬರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT