ಬೆಂಗಳೂರು: ನಗರದ ವಿವಿಧೆಡೆ ನೆಲಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೆಲಸಿದ್ದ 26 ಮಂದಿ ಶಂಕಿತ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೇಗೂರು ಠಾಣೆಯ ಪೊಲೀಸರು 10, ಹೆಬ್ಬಗೋಡಿ ಠಾಣೆಯ ಪೊಲೀಸರು 16 ಮಂದಿ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಶಂಕಿತ ಅಕ್ರಮ ವಲಸಿಗರನ್ನು ನೆಲಮಂಗಲ ಸಮೀಪದ ಸೊಂಡೇಕೊಪ್ಪದ ವಲಸಿಗರ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ನಕಲಿ ಪಾಸ್ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿಕೊಂಡು ನಗರಕ್ಕೆ ಬಂದಿದ್ದರು. ಹೆಚ್ಚಿನವರು ಗುಜರಿ ಗೋದಾಮುಗಳ ಶೆಡ್ಗಳಲ್ಲಿ ವಾಸವಿದ್ದರು. ಇನ್ನು ಕೆಲವರು ಅಪಾರ್ಟ್ಮೆಂಟ್ಗಳಲ್ಲಿ ಕೆಲಸ ಮಾಡುತ್ತಿದ್ದರು. ಕೆಲವರು ರಾತ್ರಿ ಸಮಯದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ವಶಕ್ಕೆ ಪಡೆದ ಎಲ್ಲ ಶಂಕಿತರ ದಾಖಲೆಗಳ ಪರಿಶೀಲನೆಗಾಗಿ ವಿದೇಶಿ ಪ್ರಜೆಗಳ ಪ್ರಾದೇಶಿಕ ನೋಂದಣಿ ಕೇಂದ್ರಕ್ಕೆ ಹಾಜರುಪಡಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ಹೇಳಿವೆ.

ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಅವರ ದಾಖಲೆ ಪರಿಶೀಲನೆ ನಡೆಸಿದಾಗ ಎಲ್ಲರೂ ಅಸ್ಸಾಂನವರು ಎಂಬುದು ಗೊತ್ತಾಯಿತು. ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.