ಬೆಂಗಳೂರು: ಮಾನವ ಕಳ್ಳಸಾಗಣೆಯಾಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಬಾಂಗ್ಲಾದೇಶದ 30 ವರ್ಷದ ಮಹಿಳೆಯನ್ನು ನಗರ ಪೊಲೀಸರು ರಕ್ಷಿಸಿದ್ದಾರೆ. ಸಹಾಯ ಕೋರಿ ಹುಳಿಮಾವು ಪೊಲೀಸ್ ಠಾಣೆಗೆ ಮಹಿಳೆ ಭಾನುವಾರ ಬಂದಿದ್ದರು ಎಂದು ಮೂಲಗಳು ಹೇಳಿವೆ.

‘ಉತ್ತಮ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಭಾರತಕ್ಕೆ ಕರೆತರಲಾಗಿತ್ತು. ನಗರಕ್ಕೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳಿದ್ದರು. ಆರಂಭದಲ್ಲಿ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಕೊಡಿಸಿದ್ದರು. ತಿಂಗಳಿಗೆ ₹ 20 ಸಾವಿರ ಸಂಬಳವನ್ನೂ ನೀಡಿದ್ದರು. ಬಳಿಕ ಎಚ್ಎಸ್ಆರ್ ಲೇಔಟ್ನಲ್ಲಿರುವ ಒಂದು ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆಗೆ ತಳ್ಳಿದರು’ ಎಂದು ಪೊಲೀಸರ ಎದುರು ಮಹಿಳೆ ಹೇಳಿಕೊಂಡಿದ್ದಾರೆ.

‘ಆರೋಪಿಗಳು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ನಿರ್ಜನ ಸ್ಥಳಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದರು. ಆರೋಪಿಗಳು ಮಾತುಕತೆಯಲ್ಲಿ ತೊಡಗಿದ್ದಾಗ ತಪ್ಪಿಸಿಕೊಂಡು ಬಂದೆ’ ಎಂಬುದಾಗಿ ಮಹಿಳೆ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ.

‘ಮಹಿಳೆಯನ್ನು ರಕ್ಷಿಸಲಾಗಿದೆ. ಅವರ ದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ವಹಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.