ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮುಖ ಆರೋಪಿ
‘ಪ್ರಕರಣದ ಪ್ರಮುಖ ಆರೋಪಿ ಸಾಗರ್ ರಾಜಸ್ತಾನದ ಆಕ್ಸಿಸ್ ಬ್ಯಾಂಕ್ ಶಾಖೆಯೊಂದರಲ್ಲಿ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ. ಬ್ಯಾಂಕ್‌ಗಳಲ್ಲಿ ವಹಿವಾಟು ಸ್ಥಗಿತಗೊಂಡಿರುವ ಹಣವನ್ನು ಬಿಡಿಸಿಕೊಳ್ಳುವುದು ಹೇಗೆ ಎಂಬ ಮಾಹಿತಿ ಆತನಿಗೆ ಇತ್ತು. ಅದೇ ಮಾಹಿತಿ ಆಧರಿಸಿ ವಂಚನೆಗೆ ಸಂಚು ರೂಪಿಸಿದ್ದ’ ಎಂದು ಪೊಲೀಸರು ಹೇಳಿದರು. ‘ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ನಲ್ಲೂ ಸಾಗರ್ ಭಾಗಿಯಾಗಿದ್ದ. ಅಲಹಾಬಾದ್ ಪೊಲೀಸರು ಈತನನ್ನು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದ ಬಳಿಕ ಸಾಗರ್ ಬೆಂಗಳೂರಿನ ಹಲಸೂರಿನ ಐಸಿಐಸಿಐ ಬ್ಯಾಂಕ್‌ನಲ್ಲಿ ಫ್ರೀಜ್ ಆಗಿದ್ದ ₹1.32 ಕೋಟಿಯ ಬಗ್ಗೆ ತಿಳಿದುಕೊಂಡಿದ್ದ. ಸರ್ಕಾರಿ ಅಧಿಕಾರಿ ರೀತಿ ದಾಖಲಾತಿ ಸಿದ್ಧಪಡಿಸಿಕೊಂಡು ಸರ್ಕಾರಿ ಇ–ಮೇಲ್ ಐ.ಡಿ ಬೇಕೆಂದು ಸರ್ಕಾರ ಅಧೀನದಲ್ಲಿ ಬರುವ ಕೆ–ಸ್ವಾನ್ (ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‌ವರ್ಕ್) ಆನ್‌ಲೈನ್ ಮೂಲಕ ಮನವಿ ಸಲ್ಲಿಸಿ ಮೇಲ್ ಐ.ಡಿ ಪಡೆದುಕೊಂಡಿದ್ದ’ ಎಂದು ಪೊಲೀಸರು ಹೇಳಿದರು.