ಭಾನುವಾರ, ಏಪ್ರಿಲ್ 18, 2021
25 °C

ಬ್ಯಾಂಕ್‌ ನೌಕರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಷ್ಟ್ರವ್ಯಾಪಿ ಕರೆ ನೀಡಿರುವ ಮುಷ್ಕರ ಬೆಂಬಲಿಸಿ ನಗರದಲ್ಲೂ ಬ್ಯಾಂಕ್ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ನೌಕರರು, ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ಘೋಷಣೆಗಳನ್ನು ಕೂಗಿದರು.

‘2 ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದ ಕೇಂದ್ರ ಸರ್ಕಾರ, ಇದೀಗ 4 ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಯತ್ನಿಸುತ್ತಿದೆ. ಈ ಕ್ರಮವನ್ನು ಖಂಡಿಸುತ್ತೇವೆ’ ಎಂದು ಪ್ರತಿಭಟನಕಾರರು ಹೇಳಿದರು.

‘ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೆ, ಸಾರ್ವಜನಿಕರ ಹಣವೆಲ್ಲವೂ ಖಾಸಗಿಯವರ ಪಾಲಾಗಲಿದೆ. ದೇಶದ ಆರ್ಥಿಕ ವ್ಯವಸ್ಥೆಗೆ ಮುಳುವಾಗಲಿದೆ. ಜನರ ಹಣಕ್ಕೆ ಯಾವುದೇ ಭದ್ರತೆಯೂ ಇರುವುದಿಲ್ಲ. ಹೀಗಾಗಿ, ಬ್ಯಾಂಕ್ ಖಾಸಗೀಕರಣ ಕ್ರಮವನ್ನು ಕೇಂದ್ರ ಸರ್ಕಾರ ಕೈಬಿಡಬೇಕು’ ಎಂದೂ ದೂರಿದರು.

ಮುಷ್ಕರದಿಂದಾಗಿ ನಗರದ ಬ್ಯಾಂಕ್‌ಗಳು ಬಂದ್ ಆಗಿದ್ದವು. ನಿರಂತರ ರಜೆ ನಂತರ ಸೋಮವಾರ ಬ್ಯಾಂಕ್ ತೆರೆಯಬಹುದೆಂದು ಬಂದಿದ್ದ ಗ್ರಾಹಕರಿಗೆ ನಿರಾಸೆ ಉಂಟಾಯಿತು. ಹಣ ಪಡೆಯಲು ಬಂದಿದ್ದ ಹಿರಿಯ ನಾಗರಿಕರು ಬ್ಯಾಂಕ್ ಎದುರು ಗಂಟೆಗಟ್ಟಲೇ ಕಾದು ವಾಪಸು ಹೋದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು