ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧಿತ ಪ್ಲಾಸ್ಟಿಕ್‌ ಜಪ್ತಿ: ₹5 ಲಕ್ಷ ದಂಡ

Last Updated 11 ಜುಲೈ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉಪಯೋಗಿಸುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳನ್ನು ಅನಿರೀಕ್ಷಿತವಾಗಿ ತಪಾಸಣೆ ಮಾಡಿರುವ ಅಧಿಕಾರಿಗಳು, ಅವುಗಳ ಮೇಲೆ ₹5.97 ಲಕ್ಷ ದಂಡ ವಿಧಿಸಿದ್ದಾರೆ.

ಜುಲೈ 1ರಿಂದ 10ರ ವರೆಗೆ ನಗರದ 990 ಸ್ಥಳಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿ, ಒಟ್ಟು 1,380.8 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ.

ಪಶ್ಚಿಮ ವಲಯದಲ್ಲಿ ಅತಿಹೆಚ್ಚು ಅಂದರೆ 631 ಕೆ.ಜಿ. ಪ್ಲಾಸ್ಟಿಕ್‌ ವಶಪಡಿಸಿಕೊಳ್ಳಲಾಗಿದೆ. ಮಹದೇವಪುರ– 153 ಕೆ.ಜಿ, ಆರ್‌.ಆರ್‌. ನಗರ– 129.5 ಕೆ.ಜಿ, ದಾಸರಹಳ್ಳಿ– 118 ಕೆ.ಜಿ, ದಕ್ಷಿಣ– 110.5 ಕೆ.ಜಿ., ಪೂರ್ವ– 88.3 ಕೆ.ಜಿ, ಬೊಮ್ಮನಹಳ್ಳಿ– 77 ಕೆ.ಜಿ, ಯಲಹಂಕ ವಲಯದಲ್ಲಿ 73.5 ಕೆ.ಜಿ ಪ್ಲಾಸ್ಟಿಕ್‌ ಜಪ್ತಿಯಾಗಿದೆ.

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳ ಎಲ್ಲ ವಾರ್ಡ್‌ಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಅನ್ನು ಸಂಪೂರ್ಣ ನಿಯಂತ್ರಿಸಲು ಘನತ್ಯಾಜ್ಯ ವಿಭಾಗದಿಂದ ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡದವರು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ದಂಡ ವಿಧಿಸುವ ಜೊತೆಗೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಘನತ್ಯಾಜ್ಯ ವಿಭಾಗದ ಮುಖ್ಯ ಮಾರ್ಷಲ್‌ ರಾಜ್‌ಬೀರ್‌ ಸಿಂಗ್‌ ತಿಳಿಸಿದರು.

‘ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್‌ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT