ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲಿ ಬ್ಯಾನರ್‌: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ₹50 ಸಾವಿರ ದಂಡ

Published 10 ಮಾರ್ಚ್ 2024, 15:57 IST
Last Updated 10 ಮಾರ್ಚ್ 2024, 15:57 IST
ಅಕ್ಷರ ಗಾತ್ರ

ಬೆಂಗಳೂರು: ಪೂರ್ವ ವಲಯ ವಸಂತನಗರ ವ್ಯಾಪ್ತಿಯ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ಬಿಬಿಎಂಪಿ ಸಿಬ್ಬಂದಿ  ತೆರವುಗೊಳಿಸಿದ್ದು, ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವರಿಗೆ ₹50 ಸಾವಿರ ದಂಡ ವಿಧಿಸಿದ್ದಾರೆ.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ, ಎ.ಬಿ.ಡಿ. ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾಜೀವ್ ಗೌಡ ಅವರು, ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರ ಸಚಿವರಾದ ಕೆ.ಎಚ್. ಮುನಿಯಪ್ಪ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಅನಧಿಕೃತವಾಗಿ ಬ್ಯಾನರ್‌ ಅಳವಡಿಸಿದ್ದರು.

ಈ ಬ್ಯಾನರ್‌ಗೆ ಪಾಲಿಕೆ ವತಿಯಿಂದ ಅನುಮತಿ ಪಡೆದಿಲ್ಲ. ಆದ್ದರಿಂದ, ರಾಜೀವ್‌ ಗೌಡ ಅವರಿಗೆ ₹50 ಸಾವಿರ ದಂಡ ವಿಧಿಸಿ, ಪಾಲಿಕೆ ಮುಖ್ಯ ಆಯುಕ್ತರ ಖಾತೆಗೆ ಹಣ ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ಪತ್ರದ ಮೂಲಕ ಸೂಚಿಸಿದ್ದಾರೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ಸ್ಯಾಂಕಿ ರಸ್ತೆಯಲ್ಲಿ ರಾಜೀವ್‌ ಗೌಡ ಅವರು ಅಳವಡಿಸಿದ್ದ ಬ್ಯಾನರ್‌
ಸ್ಯಾಂಕಿ ರಸ್ತೆಯಲ್ಲಿ ರಾಜೀವ್‌ ಗೌಡ ಅವರು ಅಳವಡಿಸಿದ್ದ ಬ್ಯಾನರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT