ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ: ಬೆಂಗಾಲ್ ಹುಲಿ ದತ್ತು ಪಡೆದ ಆರ್ಕಿಡ್ಸ್ ಶಾಲೆ ವಿದ್ಯಾರ್ಥಿಗಳು

Last Updated 14 ಜುಲೈ 2022, 6:00 IST
ಅಕ್ಷರ ಗಾತ್ರ

ಆನೇಕಲ್:ಬನ್ನೇರುಘಟ್ಟ ಜೈವಿಕ ಉದ್ಯಾನದ ಮಿಥುನ್‌ ಎಂಬ ಎಂಟು ವರ್ಷದ ಹುಲಿಯನ್ನು ಬೆಂಗಳೂರಿನ ಬಿಟಿಎಂ ಬಡಾವಣೆಯ ಆರ್ಕಿಡ್ಸ್‌ ಇಂಟರ್‌ನ್ಯಾಷನಲ್‌ ಶಾಲೆಯ ವಿದ್ಯಾರ್ಥಿಗಳು ದತ್ತು ಪಡೆಯುವ ಮೂಲಕ ಪ್ರಾಣಿಗಳ ಬಗೆಗಿನ ಪ್ರೀತಿಯನ್ನು ತೋರಿದ್ದಾರೆ.

ಶಾಲೆಯ ವಿದ್ಯಾರ್ಥಿಗಳು ಹಣ ಸಂಗ್ರಹಿಸಿ₹ 1,16,794ಗೆ ಹುಲಿ ದತ್ತು ಯೋಜನೆಗೆ ನೀಡುವ ಮೂಲಕ ರಾಷ್ಟ್ರೀಯ ಪ್ರಾಣಿ ಹುಲಿಯ ಸಂರಕ್ಷಣೆಯ ಬಗ್ಗೆ ಕಾಳಜಿಯನ್ನು ತೋರಿದ್ದಾರೆ. ವನ್ಯಜೀವಿಗಳ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಉಂಟು ಮಾಡಲು ಸಂಸ್ಥೆಯು ಈ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದು ಶಾಲೆಯ ಪ್ರಾಚಾರ್ಯೆ ಬಿ.ಮಂಜುಳ ತಿಳಿಸಿದರು.

ಶಾಲೆಯ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಎರಡು ವಾರಗಳ ಕಾಲ ತಮ್ಮ ಪಾಕೆಟ್‌ ಮನಿಯನ್ನು ಸಂಗ್ರಹಿಸಿ ಹುಲಿ ದತ್ತು ಯೋಜನೆಗೆ ನೀಡುವ ಮೂಲಕ ಪ್ರಾಣಿಪ್ರೀತಿಯನ್ನು ಮೆರೆದಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನದ ಉಪನಿರ್ದೇಶಕ ಹರೀಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT