ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ: ಜ.1ರಿಂದ ಸಫಾರಿ ದರ ಏರಿಕೆ

Last Updated 30 ಡಿಸೆಂಬರ್ 2021, 5:16 IST
ಅಕ್ಷರ ಗಾತ್ರ

ಆನೇಕಲ್:ಬನ್ನೇರುಘಟ್ಟ ಜೈವಿಕ ಉದ್ಯಾನದ ಸಫಾರಿ ದರವು ಹೊಸ ವರ್ಷಕ್ಕೆ ಏರಿಕೆಯಾಗಲಿದೆ.

ಇಂಧನ, ಪಶು ಆಹಾರ ದರ, ನಿರ್ವಹಣಾ ವೆಚ್ಚ ಏರಿಕೆಯಾದ ಹಿನ್ನೆಲೆಯಲ್ಲಿ ಮೃಗಾಲಯ ಪ್ರಾಧಿಕಾರದ ಕಾರ್ಯಕಾರಿ ಮಂಡಳಿಯು ಜ. 1ರಿಂದ ಪ್ರವೇಶ ದರದಲ್ಲಿ ಏರಿಕೆ ಮಾಡಲು ತೀರ್ಮಾನ ಕೈಗೊಂಡಿದೆ ಎಂದು ಜೈವಿಕ ಉದ್ಯಾನದ ಕಾರ್ಯ ನಿರ್ವಾಹಕ ನಿರ್ದೇಶಕಿ ವನಶ್ರೀವಿಪಿನ್‌ ಸಿಂಗ್‌ ಅವರು ತಿಳಿಸಿದ್ದಾರೆ.

ಮೃಗಾಲಯದ ಪ್ರಾಧಿಕಾರದ ತೀರ್ಮಾನದಂತೆ ಎಲ್ಲಾ ದರಗಳಲ್ಲೂ ಶೇ 10ರಷ್ಟು ಏರಿಕೆ ಮಾಡ ಲಾಗಿದೆ. 2020ರ ಜನವರಿಯಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ಎರಡು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ವನಶ್ರೀ ವಿಪಿನ್‌ಸಿಂಗ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT