ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟದಲ್ಲಿ ಜೀಬ್ರಾ ಮರಿ ಜನನ

Last Updated 4 ಏಪ್ರಿಲ್ 2022, 19:59 IST
ಅಕ್ಷರ ಗಾತ್ರ

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜೀಬ್ರಾ ಮರಿಯೊಂದಕ್ಕೆ ಜನ್ಮ ನೀಡಿದ್ದು ನೂತನ ಅತಿಥಿ ಆಗಮನದಿಂದಾಗಿ ಜೀಬ್ರಾ ಕುಟುಂಬದ ಸಂಖ್ಯೆ ಐದಕ್ಕೇರಿದೆ ಎಂದು ಉದ್ಯಾನದ ಪಶುವೈದ್ಯಕೀಯ ವಿಭಾಗದ ಸಹಾಯಕ ನಿರ್ದೇಶಕ ಡಾ.ಕೆ.ಎಸ್.ಉಮಾಶಂಕರ್‌
ತಿಳಿಸಿದ್ದಾರೆ.

ಉದ್ಯಾನದ ಜೀಬ್ರಾ ಕಾವೇರಿ ಮತ್ತು ಭರತ್‌ ಜೋಡಿಗೆ ಮರಿ ಜನಿಸಿದೆ. ತಾಯಿ ಮತ್ತು ಮರಿ ಆರೋಗ್ಯವಾಗಿದ್ದು ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲಕರ ವೀಕ್ಷಣೆಯಲ್ಲಿ ವಿಶೇಷ ಕಾಳಜಿ ವಹಿಸಿ ತಾಯಿ ಮತ್ತು ಮರಿಯನ್ನು ಆರೈಕೆ ಮಾಡಲಾಗುತ್ತಿದೆ ಎಂದರು.

ಜೈವಿಕ ಉದ್ಯಾನದ ಉಪನಿರ್ದೇಶಕ ಹರೀಶ್‌ ಮಾತನಾಡಿ ಮೃಗಾಲಯಕ್ಕೆ ಭೇಟಿ ನೀಡುವ ಸಂದರ್ಶಕರು ಮರಿಯನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT