ಭಾನುವಾರ, ಮಾರ್ಚ್ 7, 2021
32 °C

ಬಾರ್‌ ಆ್ಯಂಡ್ ರೆಸ್ಟೋರೆಂಟ್‌ಗೆ ಅನುಮತಿ ನೀಡಿಲ್ಲ: ಅಬಕಾರಿ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ಚಿಕ್ಕಗೊಲ್ಲರಹಟ್ಟಿಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಇಲಾಖೆ ವತಿಯಿಂದ ಅನುಮತಿ ನೀಡಿಲ್ಲ ಎಂದು ಅಬಕಾರಿ ಇಲಾಖೆಯ ಸೂಪರಿಂಟೆಂಡೆಂಟ್‌ ಎಚ್‌.ರಮೇಶ್‍ ಕುಮಾರ್ ಹೇಳಿದರು.

ಬಾರ್ ತೆರೆಯುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರಿಂದ ಮನವಿ ಸ್ವೀಕರಿಸಿ, ‘ಸ್ಥಳೀಯರ ಭಾವನೆಗಳಿಗೆ ವಿರುದ್ಧವಾಗಿ ಬಾರ್‌ ತೆರೆಯಲು ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಎಸ್.ಲೋಕನಾಥ್, ‘ರೆಸ್ಟೋರೆಂಟ್ ಪ್ರಾರಂಭಿಸಲು ಅನುಮತಿ ನೀಡುವಂತೆ ಕೋರಿ ಪಂಚಾಯಿತಿಗೆ ಮನವಿ ಬಂದಿದೆ. ಆದರೆ, ಬಾರ್ ಆ್ಯಂಡ್ ರೆಸ್ಟೋರೆಂಟ್ ಎಂದು ಮಾಲೀಕರು ನಮೂದಿಸಿಲ್ಲ. ಈ ಸಂಬಂಧ ಸಾರ್ವಜನಿಕರಿಂದ ದೂರು ಬಂದಿದೆ. ಹೀಗಾಗಿ, ಅನುಮತಿ ನೀಡುವುದಿಲ್ಲ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು