ಗುರುವಾರ , ಏಪ್ರಿಲ್ 22, 2021
22 °C
ಪಬ್ ಹಾಗೂ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳ ಶಬ್ದ ಮಾಲಿನ್ಯ

‘ನಿರಂತರ ನಿಗಾ ವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಇಂದಿರಾ ನಗರದ ಜನವಸತಿ ಪ್ರದೇಶಗಳಲ್ಲಿನ ಪಬ್ ಹಾಗೂ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳ ಶಬ್ದ ಮಾಲಿನ್ಯ ಪ್ರಮಾಣದ ಬಗ್ಗೆ ಪೊಲೀಸರು ನಿರಂತರ ನಿಗಾ ವಹಿಸಬೇಕು’ ಎಂದು ಹೈಕೋರ್ಟ್‌ ತಾಕಿತು ಮಾಡಿದೆ.

‘ಇಂದಿರಾ ನಗರದ ಜನವಸತಿ ಪ್ರದೇಶಗಳಲ್ಲಿ ಪಬ್ ಹಾಗೂ ಬಾರ್‌ಗಳಿಂದ ವಿಪರೀತ ಶಬ್ದ ಮಾಲಿನ್ಯ ಉಂಟಾಗುತ್ತಿದೆ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ಪೂರ್ವ ವಿಭಾಗದ ಡಿಸಿಪಿಯವರ ಹೇಳಿಕೆಯನ್ನು ಜ್ಞಾಪನಾ ಪತ್ರದ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರ ವಕೀಲ ವಿ.ಶ್ರೀನಿಧಿ, ‘ನಿಯಮ ಉಲ್ಲಂಘಿಸಿರುವ ಪಬ್ ಮತ್ತು ಬಾರ್‌ಗಳಿಗೆ ಕರ್ನಾಟಕ ಪೌರಾಡಳಿತ ಕಾಯ್ದೆ ನಿಯಮದಂತೆ ನೋಟಿಸ್ ನೀಡಲಾಗಿದೆ’ ಎಂದು ವರದಿ ಸಲ್ಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು