ಭಾನುವಾರ, ನವೆಂಬರ್ 29, 2020
19 °C

ಬಸನಗೌಡ ಪಾಟೀಲ ಯತ್ನಾಳ್‌ ಸಿಎಂ ಆಗಲು ಸಾಧ್ಯವಿಲ್ಲ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿ.ಎಸ್‌. ಯಡಿಯೂರಪ್ಪ ಆಲದ ಮರ ಇದ್ದಂತೆ. ಆ ಮರದ ಕೆಳಗೆ ನಾವು ರಾಜಕಾರಣ ಮಾಡಬೇಕು. ಅವರನ್ನು ಟೀಕೆ ಮಾಡಿ ನೀವು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತಿರುಗೇಟು ನೀಡಿದ್ದಾರೆ.

ಯತ್ನಾಳ್ ಅವರು ಮುಖ್ಯಮಂತ್ರಿ ಆಗುವ ಹಗಲುಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಬದಲಿಸಬೇಕು ಉತ್ತರಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಚರ್ಚೆ ನಡೆದಿಲ್ಲ. ಯತ್ನಾಳ್ ಅವರು ಸ್ವಾರ್ಥದಿಂದ ಹೇಳಿಕೆ ನೀಡಿದ್ದಾರೆ ಎಂದು ಹರಿಹಾಯ್ದರು.

ಪಕ್ಷದ ವರಿಷ್ಠರು ಯಡಿಯೂರಪ್ಪ ಅವರ ನಡೆ ಸಹಿಸಿಕೊಳ್ಳುತ್ತಿಲ್ಲ ಎಂಬ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಯಾರೇ ಇಂತಹ ಹೇಳಿಕೆಗಳನ್ನು ನೀಡಿದರೂ ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು