ರಾಜರಾಜೇಶ್ವರಿನಗರ: ‘ಬುದ್ದ, ಬಸವ ಹಾಗೂ ಬಿ.ಆರ್. ಅಂಬೇಡ್ಕರ್, ಮಹಾತ್ಮಗಾಂಧೀಜಿ ಅವರ ತತ್ವ, ಸಿದ್ಧಾಂತ, ವಿಚಾರಧಾರೆಗಳು ಕಲುಷಿತ ಸಮಾಜದ ಪರಿವರ್ತನೆಗೆ ಪ್ರೇರಕ ಶಕ್ತಿಯಾಗಿವೆ’ ಎಂದು ಶಾಸಕ ಎಸ್. ಟಿ. ಸೋಮಶೇಖರ್ ಹೇಳಿದರು.

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆ ಒಂದನೇ ಹಂತ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಷ್ಠಾನ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರರು ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತ್ಯುತ್ಸವ ಮತ್ತು ನಾಮಫಲಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಸವಣ್ಣವರ ಆಶಯದಂತೆ ಸಮ ಸಮಾಜ ನಿರ್ಮಾಣದ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ದೃಢಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಚಿಂತಕ ವಡ್ಡಗೆರೆ ನಾಗರಾಜಯ್ಯ ಮಾತನಾಡಿ, ‘ಪ್ರತಿ ಸಮುದಾಯಕ್ಕೂ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ಪ್ರಯತ್ನಿಸಿದ್ದರು’ ಎಂದು ತಿಳಿಸಿದರು.

‘ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬರಿಗೂ ಸಂವಿಧಾನದ ಮೂಲಕ ಅಧಿಕಾರ, ಸಾಮಾಜಿಕ ನ್ಯಾಯ, ಸಮಾನ ಹಕ್ಕುಗಳನ್ನು ಕೊಡಿಸುವ ಮೂಲಕ ಸಮಾನತೆ ತರಲು ಪ್ರಯತ್ನ ನಡೆಸಿದ್ದರು ಎಂದು ವಿವರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಷ್ಠಾನ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ಮುನಿರಾಜು ಮಾತನಾಡಿದರು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್. ಕದರಪ್ಪ, ಟ್ರಸ್ಟ್ ಪದಾಧಿಕಾರಿಗಳಾದ ಆರ್.ರುದ್ರಸ್ವಾಮಿ ,ಆತ್ಮಾನಂದ, ವೆಂಕಟೇಶ್, ವಿ ಚಲಪತಿ, ಆಟೋ ಗೋವಿಂದರಾಜು, ಸೈಯದ್ ಅಹಮದ್, ಅಮಾನುಲ್ಲಾ, ಬಾಲಯ್ಯ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ ಹಾಗೂ . ಕಂಬಳಿ ವಿತರಿಸಲಾಯಿತು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.