ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಸ್ವಯಂ ರಕ್ಷಣಾ ಪಡೆ ರಚನೆ: ಬಸವರಾಜ ಬೊಮ್ಮಾಯಿ

Last Updated 9 ಮಾರ್ಚ್ 2021, 20:46 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳೆಯರಿಗೆ ಇಂದಿನ ದಿನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ ಅಗತ್ಯವಿದೆ. ಹೀಗಾಗಿ, ರಾಜ್ಯದಲ್ಲಿ ಸ್ವಯಂ ರಕ್ಷಣಾ ಪಡೆ ರಚಿಸುವ ಸಂಬಂಧ ಹೊಸ ಯೋಜನೆ ಜಾರಿಗೊಳಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಾಲಾ–ಕಾಲೇಜು ವಿದ್ಯಾರ್ಥಿನಿಯರಿಗಾಗಿ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ವತಿಯಿಂದ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಸ್ತ್ರರಹಿತ ಸ್ವಯಂ ರಕ್ಷಣಾ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ಆಧುನಿಕ ಕಾಲದಲ್ಲಿ ಮಹಿಳೆಯರ ಸುರಕ್ಷತೆಯದ್ದೇ ದೊಡ್ಡ ಸವಾಲಾಗಿದೆ. ಮಹಿಳೆಯರು ತಮ್ಮನ್ನು ತಾವು ರಕ್ಷಿಸಿಕೊಳ್ಳುವಷ್ಟು ಶಕ್ತಿವಂತರಾಗಬೇಕು. ಅದಕ್ಕಾಗಿ ಸ್ವಯಂ ರಕ್ಷಣಾ ತರಬೇತಿ ಪಡೆಯಬೇಕು. ಸ್ವಯಂ ರಕ್ಷಣಾ ಪಡೆ ರಚನೆ ಸಂಬಂಧ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದ್ದು, ಪ್ರಸ್ತಾವನೆ ಸಿದ್ಧಪಡಿಸಿ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ’ ಎಂದೂ ಹೇಳಿದರು.

‘ಮಹಿಳಾ ಕಾನ್‌ಸ್ಟೆಬಲ್‌ಗಳಿಗೆ ವಿಶೇಷ ತರಬೇತಿ ನೀಡಲು ಹೊಸದಾದ ತರಬೇತಿ ಶಾಲೆ ಆರಂಭಿಸಲಾಗುವುದು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT