ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯವಾಸಿಗೂ ಮೂಲಸೌಕರ್ಯ: ಕಾರಜೋಳ

Last Updated 17 ಜುಲೈ 2020, 11:08 IST
ಅಕ್ಷರ ಗಾತ್ರ

ಬೆಂಗಳೂರು: ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಕುರಿತು ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅರಣ್ಯ ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಾಕಿ ಇರುವ ಸಮುದಾಯ ಅರಣ್ಯ ಹಕ್ಕು ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ 123 ಎಕರೆ ಜಮೀನನ್ನು ಉದ್ದೇಶಿತ ಯೋಜನೆಗಾಗಿ ಸದ್ಬಳಕೆಯಾಗುವಂತೆ ಕ್ರಮಕೈಗೊಳ್ಳಬೇಕು. ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಸುಗಮವಾಗಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಸಲಹೆ ನೀಡಿದರು

ಬಾಗಲಕೋಟೆ ಜಿಲ್ಲೆಯ ಮುಧೋಳ, ಬೀಳಗಿ ಹಾಗು ಜಮಖಂಡಿ ತಾಲೂಕುಗಳಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ‌ಸಿರುವವರ ಜಮೀನುಗಳಲ್ಲಿ ಪಾಲಿಗಾನ್ಸ್ ಒದಗಿಸುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಾರಜೋಳ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಸಲಹೆಗಾರ ಇ.ವೆಂಕಟಯ್ಯ, ಅರಣ್ಯ ‌ಇಲಾಖೆಯ ಅಪರ‌ ಮುಖ್ಯಕಾರ್ಯದರ್ಶಿ ಸಂದೀಪ ದವೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT