ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎ ವಿದ್ಯಾರ್ಥಿನಿ ಪ್ರಭುಧ್ಯಾ ಸಾವು: ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ

Published 18 ಮೇ 2024, 2:41 IST
Last Updated 18 ಮೇ 2024, 2:41 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ಪ್ರಭುಧ್ಯಾ (21) ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ಮುಂದುವರಿಸಿರುವ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು, ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಭುಧ್ಯಾ ಅವರ ಸಹಪಾಠಿಗಳು ಹಾಗೂ ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

‘ಠಾಣೆ ವ್ಯಾಪ್ತಿಯ ಬೃಂದಾವನ ಬಡಾವಣೆಯ ಮನೆಯೊಂದರ ಸ್ನಾನದ ಕೊಠಡಿಯಲ್ಲಿ ಪ್ರಭುದ್ಯಾ ಅವರ ಮೃತದೇಹ ಪತ್ತೆಯಾಗಿತ್ತು. ಕೈ ಹಾಗೂ ಕತ್ತಿನಲ್ಲಿ ಗಾಯವಾಗಿತ್ತು. ಈ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಹೀಗಾಗಿ, ಐಪಿಸಿ 174 (ಸಿ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮನೆಯ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಓಡಾಡಿದ್ದ ಬಗ್ಗೆ ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ. ಮೊಬೈಲ್ ಕರೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘ಕ್ಷಮಿಸಿ ಅಮ್ಮ...’ ಎಂಬುದಾಗಿ ಬರೆದಿರುವ ಎರಡು ಪತ್ರಗಳು ಮನೆಯಲ್ಲಿ ಸಿಕ್ಕಿವೆ. ಇವು ಯಾರ ಹಸ್ತಾಕ್ಷರ ಎಂಬುದನ್ನು ತಿಳಿಯಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಸದ್ಯದಲ್ಲೇ ಕೈ ಸೇರಲಿದ್ದು, ಸಾವಿನ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT