ಶನಿವಾರ, ಫೆಬ್ರವರಿ 29, 2020
19 °C

ಬಿಬಿಎಂಪಿ: 10 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಬಿಬಿಎಂಪಿಯ 10 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಗುರುವಾರ ಅವಿರೋಧವಾಗಿ ನಡೆಯಿತು.

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಎಲ್.ಶ್ರೀನಿವಾಸ್, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿಗೆ ಜಿ.ಮಂಜುನಾಥ ರಾಜು, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗೆ ಆಶಾಸುರೇಶ್ (ಬೆಳ್ಳಂದೂರು ವಾರ್ಡ್) , ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿಗೆ ಮೋಹನ್ ಕುಮಾರ್, ವಾರ್ಡ್ ಮಟ್ಟದ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿಗೆ ಜಿ.ಕೆ.ವೆಂಕಟೇಶ್ (ಎನ್‌ಟಿಆರ್), ಶಿಕ್ಷಣ ಸ್ಥಾಯಿ ಸಮಿತಿಗೆ ಮಂಜುಳಾ ಎನ್.ಸ್ವಾಮಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಹನುಮಂತಯ್ಯ, ಅಪೀಲುಗಳ ಸ್ಥಾಯಿ ಸಮಿತಿಗೆ ಸಿ.ಆರ್.ಲಕ್ಷ್ಮೀ ನಾರಾಯಣ, ಮಾರುಕಟ್ಟೆ ಸ್ಥಾಯಿ ಸಮಿತಿಗೆ ಆರ್.ಪದ್ಮಾವತಿ (ಚೌಡೇಶ್ವರಿ ವಾರ್ಡ್), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸ್ಥಾಯಿ ಸಮಿತಿಗೆ ಅರುಣಾ ರವಿ ಆಯ್ಕೆಯಾಗಿದ್ದಾರೆ. 

ತೋಟಗಾರಿಕೆ ಸ್ಥಾಯಿ ಸಮಿತಿ ಮತ್ತು ಲೆಕ್ಕಪತ್ರ ಸಮಿತಿಗಳಿಗೆ ಆಯ್ಕೆ ಮುಂದೂಡಲಾಗಿದೆ. ಅಂಜನಪ್ಪ ಅವರ ಎರಡೂ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಮುಂದೂಡಲಾಗಿದೆ ಎಂದು ಮೇಯರ್ ಎಂ.ಗೌತಮ್ ಕುಮಾರ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು